ಹಾಸನ ಪೆನ್‌ಡ್ರೈವ್  ಪ್ರಕರಣ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ನಿರ್ಧಾರ

0
20

ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ.

ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವೀಡಿಯೋ ತುಣುಕುಗಳು ಹರಿದಾಡುತ್ತಿದ್ದು, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.
ಈ ಹಿನ್ನೆಲೆಯಲ್ಲಿ ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಅವರ ಮನವಿಗೆ ಸ್ಪಂದಿಸಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದಿದ್ದಾರೆ.

Previous articleಸಂಸದ ವಿ. ಶ್ರೀನಿವಾಸ ಪ್ರಸಾದ್ ಸ್ಥಿತಿ ಗಂಭೀರ, ಮಣಿಪಾಲ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ
Next articleಕುಂದಾನಗರಿಯಲ್ಲಿ ಮೋದಿ…