ಹಿಂಸಾತ್ಮಕ ರೀತಿಯಲ್ಲಿ ಅಕ್ರಮವಾಗಿ ಗೋವು ಸಾಗಾಟ

0
25

ಮಂಗಳೂರು: ಗೋವುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಘಟನೆ ಮಂಗಳೂರಿನಲ್ಲಿ ನಡೆದಿದ್ದು 25 ಗೋವುಗಳನ್ನು ರಕ್ಷಿಸಲಾಗಿದೆ.
ಪಿಕಪ್ ವಾಹನದಲ್ಲಿ ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಹಿಂದೂ ಸಂಘಟನೆಯ ಕಾರ್ಯಕರ್ತರು ಮಂಗಳೂರು- ಮೂಡುಬಿದಿರೆ ರಸ್ತೆಯ ಸೂರಲ್ಪಾಡಿಯಲ್ಲಿ ತಡೆದು ನಿಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಪಿಕಪ್ ವಾಹನವನ್ನು ಪರಿಶೀಲಿಸಿದಾಗ 25 ಗೋವುಗಳು ಪತ್ತೆಯಾಗಿವೆ. ಗೋವುಗಳ ಮುಂಗಾಲನ್ನು ವಾಹನದ ಮೇಲ್ಬಾಗದ ಟಾಪ್‌ಗೆ ಕಟ್ಟಿ ಹಿಂಸಾತ್ಮಕ ರೀತಿಯಲ್ಲಿ ಅವುಗಳನ್ನು ಸಾಗಿಸುತ್ತಿರುವುದು ಕಂಡು ಬಂದಿದೆ. ಬಳಿಕ ಹಿಂದೂ ಕಾರ್ಯಕರ್ತರು ಪಿಕಪ್ ವಾಹನ ಮತ್ತು ಗೋವುಗಳನ್ನು ಬಜಪೆ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ.

Previous articleಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ
Next articleಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಹೈಡ್ರೋವೀಡ್ ಗಾಂಜಾ, ಚರಸ್ ಮಾರಾಟ ಮಾಡುತ್ತಿದ್ದ ಯುವಕರಿಬ್ಬರ ಸೆರೆ