ಹಿರಿಯ ಪತ್ರಕರ್ತ ಮುಳ್ಳಳ್ಳಿ ಸೂರಿ ನಿಧನ

0
18

ಬೆಂಗಳೂರು: ಹಿರಿಯ ಪತ್ರಕರ್ತರಾದ ಮುಳ್ಳಳ್ಳಿ ಸೂರಿ ಅವರು ಇಂದು ನಿಧನರಾದರು. ನಾಲ್ಕು ತಿಂಗಳ ಹಿಂದೆ ಖಾಸಗಿ ಆಸ್ಪತ್ರೆಯಲ್ಲಿ ಬ್ರೈನ್​ ಟ್ಯೂಮರ್ ಆಪರೇಶನ್​ಗೆ ಒಳಗಾಗಿದ್ದ ಅವರು ಬಳಿಕ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚೇತರಿಸಿಕೊಳ್ಳುವ ಹೊತ್ತಿನಲ್ಲಿ ಕೊನೆಯುಸಿರೆಳೆದಿದ್ದಾರೆ. ತಾಯಿನಾಡು, ಸಂಯುಕ್ತ ಕರ್ನಾಟಕ ಸೇರಿದಂತೆ ಹಲವು ಪತ್ರಿಕೆಯಲ್ಲಿ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದ ಅವರು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ, ಪತ್ರಕರ್ತರ ಸಹಕಾರ ಸಂಘ ಮತ್ತು ಪ್ರೆಸ್​ಕ್ಲಬ್​​ನಲ್ಲಿ ಸಕ್ರೀಯವಾಗಿದ್ದರು. ನಾಡಿನ ಗಣ್ಯರು ಸಂತಾಪ ಸೂಚಿಸಿ ಮುಳ್ಳಳ್ಳಿ ಸೂರಿ ಅವರ ಅಗಲಿಕೆಯಿಂದ ಪತ್ರಿಕೋದ್ಯಮಕ್ಕೆ ಅಪಾರ ನಷ್ಟವಾಗಿದೆ ಎಂದಿದ್ದಾರೆ.

Previous articleಸಾಲ ವಸೂಲಿ: ಬೈಕ್‍ಗೆ ಬೆಂಕಿ ಹಚ್ಚಿ ಆಕ್ರೋಶ
Next articleಅಮೂಲ್‌ ಹುಡುಗಿಯ ಸೃಷ್ಟಿಕರ್ತ ಸಿಲ್ವೆಸ್ಟರ್ ಡಕುನ್ಹಾ ನಿಧನ