ಪತ್ರಕರ್ತ ಶಶಿಧರ್ ಭಟ್ ಆರೋಗ್ಯ ವಿಚಾರಿಸಿ: ಸಹಾಯದ ಭರವಸೆ ನೀಡಿದ ಸಿಎಂ

0
9

ಹಿರಿಯ ಪತ್ರಕರ್ತ ಶಶಿಧರ್ ಭಟ್ ಚಿಕಿತ್ಸಾ ವೆಚ್ಚ ಭರಿಸಲಿರುವ ಸರ್ಕಾರ

ಬೆಂಗಳೂರು: ಹಿರಿಯ ಪತ್ರಕರ್ತರಾದ ಶಶಿಧರ್ ಭಟ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ಮೈಸೂರಿನ ಗೋಪಾಲಗೌಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಪತ್ರಕರ್ತರಾದ ಶಶಿಧರ್ ಭಟ್ ಅವರಿಗೆ ಕರೆಮಾಡಿ ಆರೋಗ್ಯ ವಿಚಾರಿಸಿದ ಅವರು, ಶೀಘ್ರ ಗುಣಮುಖರಾಗುವಂತೆ ಹಾರೈಸಿರವ ಅವರು ಈ ಕುರತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಶಶಿಧರ ಭಟ್ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ, ಆಸ್ಪತ್ರೆಯ ವೈದ್ಯರ ಜೊತೆಗೂ ಮಾತನಾಡಿ ಶಶಿಧರ್ ಭಟ್ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದು, ಮುತುವರ್ಜಿಯಿಂದ ಅವರ ಆರೈಕೆ ಮಾಡುವಂತೆ ತಿಳಿಸಿದ್ದೇನೆ.
ಸಮಾಜದ ಒಳಿತಿಗಾಗಿ ನಿರ್ಭೀತ ಧ್ವನಿಯಾಗಿದ್ದ ಶಶಿಧರ್ ಭಟ್ಟರು ಆದಷ್ಟು ಬೇಗ ಗುಣಮುಖರಾಗಿ ಬರಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.

Previous articleಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ ಕಾರ್ಯಕ್ರಮ….
Next articleಲೋಕಸಭೆಯಲ್ಲಿ ನೀಟ್‌ ವಿವಾದ ಪ್ರಸ್ತಾಪಿಸಿದ ರಾಹುಲ್‌: ಪ್ರತ್ಯುತ್ತರ ನೀಡಿದ ಧರ್ಮೇಂದ್ರ