ಹುಬ್ಬಳ್ಳಿ: ಇಲ್ಲಿ ಬೆಂಡಿಗೇರಿ ಪೊಲೀಸ್ ಠಾಣೆಯ ಕಾನ್ಸಟೇಬಲ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ದೊಡ್ಡಮನಿ ಕಾಲೋನಿಯಲ್ಲಿ ನಡೆದಿದೆ.
ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಲ್ಲಿಕಾರ್ಜುನ ರುದ್ರಾಪುರ ದೊಡ್ಡಮನಿ ಚಾಳದಲ್ಲಿದ್ದ ಬಾಡಿಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಲ್ಲಿಕಾರ್ಜುನ 2020 ನೇ ಬ್ಯಾಚಿನ ಸಿಬ್ಬಂದಿಯಾಗಿದ್ದು, ಗದಗ ಮೂಲದವರಾಗಿದ್ದಾರೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಹುಬ್ಬಳ್ಳಿಯ ಕಿಮ್ಸ್ ಶವಾಗಾರಕ್ಕೆ ರವಾನೆ ಮಾಡಿದ್ದು ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾವಿನ ಬಗ್ಗೆ ತನಿಖೆನಂತರ ಮಾಹಿತಿ ತಿಳಿಯಬೇಕಿದೆ.