Home ತಾಜಾ ಸುದ್ದಿ ಹುಬ್ಬಳ್ಳಿಯಲ್ಲಿ ಹೈ ಅಲರ್ಟ್

ಹುಬ್ಬಳ್ಳಿಯಲ್ಲಿ ಹೈ ಅಲರ್ಟ್

0

ಪೌರ ಸನ್ಮಾನ ಕಾರ್ಯಕ್ರಮಕ್ಕೆ ವಾಣಿಜ್ಯನಗರಿ ಹುಬ್ಬಳ್ಳಿಗೆ ರಾಷ್ಟ್ರಪತಿ ದ್ರೌಪದಿ‌ ಮುರ್ಮು ಆಗಮಿಸುತ್ತಿರುವ ಹಿನ್ನೆಲೆ ನಗರದಾದ್ಯಂತ ಖಾಕಿ ಹೈ ಅಲರ್ಟ್ ಘೋಷಿಸಿದೆ. ವಿಮಾನ ನಿಲ್ದಾಣದ ಸುತ್ತಲೂ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ವಿಮಾನ ನಿಲ್ದಾಣದ ಒಳಗೆ ಹೋಗುವ ಪ್ರಯಾಣಿಕರು ಹಾಗೂ ವಾಹನಗಳ ತಪಾಸಣೆ ಮಾಡಲಾಗುತ್ತಿದೆ. ಅಲ್ಲದೇ ರಸ್ತೆಯುದ್ಧಕ್ಕೂ ಪೊಲೀಸರನ್ನು ನಿಯೋಜಿಸಲಾಗಿದ್ದು, ರಾಷ್ಟ್ರಪತಿಗಳು ಸಾಗುವ ಮಾರ್ಗದಲ್ಲಿ ಸಂಚಾರಕ್ಕೆ ಅಡತಡೆಯುಂಟಾಗದಂತೆ ಎಚ್ಚರ ವಹಿಸಲಾಗಿದೆ.

ಜಿಮ್ ಖಾನಾ ಮೈದಾನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪೌರ ಸನ್ಮಾನ ನೀಡುತ್ತಿರುವ ಹಿನ್ನಲೆಯಲ್ಲಿ ಮೈದಾನದ ಸುತ್ತಮುತ್ತಲಿನ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಿರುವುದು

hubli

Exit mobile version