Home ತಾಜಾ ಸುದ್ದಿ ಹುಬ್ಬಳ್ಳಿಯ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ: ಬೊಮ್ಮಾಯಿ

ಹುಬ್ಬಳ್ಳಿಯ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ: ಬೊಮ್ಮಾಯಿ

0
CM

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಪೂರ್ವ, ಪಶ್ಚಿಮ ಮತ್ತು ಸೆಂಟ್ರಲ್ ಮೂರು ಕ್ಷೇತ್ರಗಳಲ್ಲಿಯೂ ಬಿಜೆಪಿ‌ ಜಯಭೇರಿ ಬಾರಿಸುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

ಇಂದು ಹುಬ್ಬಳ್ಳಿಯ ಬಿಜೆಪಿ ವಿಭಾಗಮಟ್ಟದ ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ಹುಬ್ಬಳ್ಳಿಯಲ್ಲಿ ನಡೆದ ವಿಭಾಗ ಮಟ್ಟದ ಸಮಾವೇಶದಲ್ಲಿ 99% ರಷ್ಟು ಪದಾಧಿಕಾರಿಗಳು ಪಾಲ್ಗೊಂಡಿದ್ದಾರೆ. ಎಲ್ಲರೂ ಬಿಜೆಪಿಯನ್ನು ಗೆಲ್ಲಿಸುವ ಜೋಶ್ ನಲ್ಲಿದ್ದಾರೆ ಎಂದರು.

ರಾಯಚೂರು ಜಿಲ್ಲೆಯ ಮಾಜಿ‌ ಸಂಸದ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬಿ.ವಿ ನಾಯಕ್ ಬಿಜೆಪಿ ಸೇರಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೇ ಖುದ್ದು ಬರಮಾಡಿಕೊಂಡಿದ್ದಾರೆ. ಕೆಲವೇ ಗಂಟೆಗಳಲ್ಲಿ ಅವರಿಗೆ ಮಾನ್ವಿ ಟಿಕೆಟ್ ಕೊಡುವ ಕುರಿತು ತೀರ್ಮಾನಿಸುತ್ತೇವೆ. ಶಿವಮೊಗ್ಗ ಕ್ಷೇತ್ರದ ಟಿಕೇಟ್ ಬಗ್ಗೆಯೂ ತೀರ್ಮಾನ ಮಾಡಲಾಗುತ್ತದೆ ಎಂದರು.

Exit mobile version