ಹುಬ್ಬಳ್ಳಿ ನೂತನ ಪಾಲಿಕೆ ಆಯುಕ್ತರಾಗಿ ಮಂಜುನಾಥ ಡೊಂಬರ

0
49


ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರನ್ನಾಗಿ ಮಂಜುನಾಥ ಡೊಂಬರ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ‌ ಆದೇಶ ಹೊರಡಿಸಿದೆ.
ಪಾಲಿಕೆ ಆಯುಕ್ತರಾಗಿದ್ದ ಡಾ. ರುದ್ರೇಶ ಘಾಳಿ ವರ್ಗಾವಣೆಯಾದ ಸ್ಥಾನಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿದ್ದ ಮಂಜುನಾಥ ಡೊಂಬರ ಅವರನ್ನ ಪಾಲಿಕೆಯ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ.
ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿದ್ದ ಡಾ.ಸಂತೋಷಕುಮಾರ ಬಿರಾದಾರ ವರ್ಗಾವಣೆಯಾಗಿದ್ದು, ಅವರ ಸ್ಥಾನಕ್ಕೆ ದೇವರಾಜ್ ಆರ್ ಅವರನ್ನು ನೇಮಕ ಮಾಡಲಾಗಿದೆ.

Previous articleಗಾಯಕಿ ಅಖಿಲಾ ಪಜಿಮಣ್ಣು ವಿಚ್ಛೇದನಕ್ಕೆ ಅರ್ಜಿ
Next articleಗೃಹಲಕ್ಷ್ಮೀ ಫಲಾನುಭವಿಗಳ ಪಟ್ಟಿ ಪರಿಷ್ಕರಿಸಲ್ಲ