Home ತಾಜಾ ಸುದ್ದಿ ಹುಬ್ಬಳ್ಳಿ ಯುವತಿಯ ಕೊಲೆ ಪ್ರಕರಣ: ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ

ಹುಬ್ಬಳ್ಳಿ ಯುವತಿಯ ಕೊಲೆ ಪ್ರಕರಣ: ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ

0
ಕೇಂದ್ರ ಸಚಿವ ಜೋಶಿ ಆಕ್ಷೇಪ

ಬೆಂಗಳೂರು: ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬುದಕ್ಕೆ ಹುಬ್ಬಳ್ಳಿಯಲ್ಲಾದ ಮತ್ತೊಂದು ಯುವತಿಯ ಕೊಲೆ ಸಾಕ್ಷಿಯಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬುದಕ್ಕೆ ಹುಬ್ಬಳ್ಳಿಯಲ್ಲಾದ ಮತ್ತೊಂದು ಯುವತಿಯ ಕೊಲೆ ಸಾಕ್ಷಿಯಾಗಿದೆ. ಭಗ್ನ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ ಹುಡುಗಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ಮತ್ತೆ ಜರುಗಿದೆ. ಮೇಲಿಂದ ಮೇಲೆ ಇಂತಹ ಘಟನೆಗಳು ಜರುಗುತ್ತಿರುವುದು ವಿಷಾದಕರ. ರಾಜ್ಯ ಸರ್ಕಾರ ಈ ಕೂಡಲೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಿ ಕುಮಾರಿ ಅಂಜಲಿ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸುತ್ತೇನೆ. ಆಕೆಯ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿ ಆ ಭಗವಂತ ನೀಡಲೆಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

Exit mobile version