Home ಅಪರಾಧ ಹುಲಿಗೆಮ್ಮ ದೇವಿ ಜಾತ್ರೆಗೆ ಹೊರಟಿದ್ದ ಪಾದಯಾತ್ರಿಗಳ ಮೇಲೆ ಹರಿದ ಲಾರಿ: ಓರ್ವ ಸಾವು

ಹುಲಿಗೆಮ್ಮ ದೇವಿ ಜಾತ್ರೆಗೆ ಹೊರಟಿದ್ದ ಪಾದಯಾತ್ರಿಗಳ ಮೇಲೆ ಹರಿದ ಲಾರಿ: ಓರ್ವ ಸಾವು

0

ಕೊಪ್ಪಳ: ಹುಲಿಗೆಮ್ಮ ದೇವಿ ಜಾತ್ರೆಗೆ ಪಾದಯಾತ್ರೆ ಹೊರಟಿದ್ದ ಭಕ್ತರ ಮೇಲೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಭಕ್ತ ಸ್ಥಳದಲ್ಲೇ ಮೃತಪಟ್ಟಿದ್ದು ಮತ್ತೋರ್ವ ಗಂಭೀರ ಗಾಯಗೊಂಡಿದ್ದಾರೆ.
ಕೊಪ್ಪಳ ತಾಲೂಕಿನ ಕೆರಳ್ಳಿ ಫ್ಲೈಓವರ್ ಬಳಿ ಘಟನೆ ನಡೆದಿದೆ. ಯಮನೂರಪ್ಪ ಸಣ್ಣಮನಿ (34) ಮೃತ ದುರ್ದೈವಿ. ಯಮನೂರಪ್ಪ ಬಾಗಲಕೋಟಯ ಹುನಗುಂದ ತಾಲೂಕಿನ ರಕ್ಕಸಗಿ ಗ್ರಾಮದ ನಿವಾಸಿ ಆಗಿದ್ದಾರೆ. ಯಮನೂರಪ್ಪ ಹಾಗೂ ಮಹಾಂತೇಶ್‌ ಹುಲಿಗೆಮ್ಮ ದೇವಿ ಜಾತ್ರೆ ಹಿನ್ನೆಲೆಯಲ್ಲಿ ಪಾದಯಾತ್ರೆ ಮೂಲಕ ದೇವಸ್ಥಾನಕ್ಕೆ ಹೊರಟ್ಟಿದ್ದರು. ಈ ವೇಳೆ ಹಿಂಬದಿಯಿಂದ ಬಂದ ಲಾರಿಯು ಪಾದಯಾತ್ರಿಗಳಿಗೆ ಡಿಕ್ಕಿ ಹೊಡೆದಿದೆ. ಯಮನೂರಪ್ಪ ಮೇಲೆ ಲಾರಿ ಹರಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟರೆ, ಮಹಾಂತೇಶ್‌ ಫ್ಲೈಓವರ್‌ ಮೇಲಿಂದ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ಬಿದ್ದ ರಭಸಕ್ಕೆ ಅವರ ಕಾಲಿನ ಪಾದವೇ ತುಂಡಾಗಿ ಬಿದ್ದಿತ್ತು. ಸದ್ಯ ಸಾವು- ಬದುಕಿನ ಮಧ್ಯೆ ಹೋರಾಡುತ್ತಿರುವ ಗಾಯಾಳು ಮಹಾಂತೇಶ್‌ನನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Exit mobile version