ಹುಲಿ ಉಗುರು: ಅರ್ಚಕರ ಬಂಧನ

0
25

ಚಿಕ್ಕಮಗಳೂರು: ಹುಲಿ ಉಗುರಿನ ಡಾಲರ್ ಹಾಕಿಕೊಂಡಿದ್ದ ಆರೋಪದ ಮೇಲೆ ದೇವಸ್ಥಾನದ ಪ್ರಧಾನ ಅರ್ಚಕರಿಬ್ಬರನ್ನು ಬಂಧಿಸಿರುವ ಘಟನೆ ತಾಲ್ಲೂಕಿನ ಖಾಂಡ್ಯದಲ್ಲಿ ನಡೆದಿದೆ.

ಬಾಳೆಹೊನ್ನೂರು ಸಮೀಪದ ಖಾಂಡ್ಯಾದ ಪ್ರಸಿದ್ಧ ಮಾರ್ಕಾಂಡೇಶ್ವರ ಸ್ವಾಮಿ ದೇವಾಲಯದ ಅರ್ಚಕರಾದ ಕೃಷ್ಣಾನಂದ ಹೊಳ್ಳ ಹಾಗೂ ನಾಗೇಂದ್ರ ಜೋಯಿಸ್ ಬಂಧಿತರು.

ಸದ್ಯ ಇಬ್ಬರನ್ನು ಅರಣ್ಯ ಇಲಾಖೆ ತೀವ್ರ ವಿಚಾರಣೆ ನಡೆಸುತ್ತಿದೆ. ಬಂಧಿತರಿಂದ ಮೂರು ಹುಲಿ ಹುಗುರು ವಶಕ್ಕೆ ಪಡೆಯಲಾಗಿದೆ.
ಇಬ್ಬರು ಅರ್ಚಕರ ವಿರುದ್ಧ ಬಾಳೆಹೊನ್ನೂರು ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.

Previous articleಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ‌ ನಡುವೆ ಮಾರಾಮರಿ
Next articleಅರಣ್ಯಾಧಿಕಾರಿಗಳ ಕ್ರಮ ಪ್ರಶ್ನಿಸಿ ಕೋರ್ಟ್‌ ಮೊರೆ ಹೋದ ಜಗ್ಗೇಶ್