ಹೆಸರು ಕಾಳು ಖರೀದಿಗೆ ಕೇಂದ್ರ ಅನುಮತಿ

0
20

ಬೆಂಗಳೂರು: ರಾಜ್ಯ ಸರ್ಕಾರದ ಮನವಿಗೆ ಸ್ಪಂದಿಸಿ, ಬೆಂಬಲ ಬೆಲೆ ಯೋಜನೆಯಲ್ಲಿ ಹೆಸರುಕಾಳು ಮತ್ತು ಸೂರ್ಯಕಾಂತಿ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿಸಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು 2024-25 ಸಾಲಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಎಫ್ ಎ ಕ್ಯೂ ಗುಣಮಟ್ಟದ ಹೆಸರು ಕಾಳು ಖರೀದಿಗೆ ಕೇಂದ್ರ ಅನುಮತಿ ನೀಡಿದ್ದು, ಪ್ರತಿ ಕ್ವಿಂಟಾಲ್ ಗೆ ರೂ 8,682-00 ನಿಗದಿಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ರೈತರು ತಾವು ಸಮೀಪದ ರೈತ ಸಂಪರ್ಕ ಕೇಂದ್ರ, ನಾಡಕಛೇರಿ, ತೋಟಗಾರಿಕ ಇಲಾಖೆ, CHC ಕೇಂದ್ರ ಗಳಿಗೆ ಭೇಟಿ ನೀಡಿ ಎಫ್. ಐ. ಡಿ ಮಾಡಿಸಿಕೊಳ್ಳಲು ವಿನಂತಿ ಕಲಬುರಗಿ ಜಿಲ್ಲೆಯಲ್ಲಿ ಈಗಾಗಲೇ ಹೆಸರು ಬೆಳೆ ಕಟಾವು ಮಾಡಲಾಗುತ್ತಿದ್ದು ಮಾರುಕಟ್ಟೆಯಲ್ಲಿ ಬೆಲೆ ಕುಸಿತ ಕಂಡಿದೆ. ಹಾಗಾಗಿ, ಬೆಂಬಲ ಬೆಲೆ ಯೋಜನೆಯಡಿಯಲ್ಲಿ‌ ಹೆಸರು ಖರೀದಿ ಮಾಡಲು ಪ್ರಸ್ತಾವನೆಯನ್ನು ಕೇಂದ್ರಕ್ಕೆ ಕಳಿಸಲಾಗಿತ್ತು. ಸರ್ಕಾರ ಅನುಮತಿ ನೀಡಿದ ಹಿನ್ನೆಲೆಯಲ್ಲಿ 22,215 ಟನ್ ಹೆಸರು ಬೆಳೆ ಖರೀದಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Previous articleಗವಿಸಿದ್ಧೇಶ್ವರ ಅರ್ಬನ್ ಬ್ಯಾಂಕಿನ ೯೧ನೇ ವಾರ್ಷಿಕ ಮಹಾಸಭೆ
Next articleರೈತರ ಪರವಾಗಿ ಕಾರ್ಯ ನಿರ್ವಹಿಸುತ್ತಿರುವ ಪ್ರಧಾನಿ ಮೋದಿ