ಹೇಮಾವತಿ : ಕಾಮಗಾರಿ ನಿಲ್ಲಿಸುವಂತೆ ಪತ್ರ ಬರೆದ ವಿ ಸೋಮಣ್ಣ

0
37

ಬೆಂಗಳೂರು:ವಿವಾದಿತ ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕ್ ಕೆನಾಲ್ ಫೀಡರ್ ಯೋಜನೆಯಿಂದ ತುಮಕೂರು ಭಾಗದ ರೈತರಿಗೆ ಅನ್ಯಾಯ ಆಗುತ್ತಿದ್ದು ಕಾಮಗಾರಿಯನ್ನು ನಿಲ್ಲಿಸುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಪತ್ರ ಬರೆದು ಒತ್ತಾಯಿಸಿದ್ದಾರೆ.
ವಿವಾದಿತ ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕ್ ಕೆನಾಲ್ ಫೀಡರ್ ಯೋಜನೆಯಿಂದ ತುಮಕೂರು ಭಾಗದ ರೈತರಿಗೆ ಅನ್ಯಾಯ ಆಗುತ್ತಿದ್ದು, ತಕ್ಷಣವೇ ಈ ಯೋಜನೆಯ ಕಾಮಗಾರಿಯನ್ನು ನಿಲ್ಲಿಸುವಂತೆ ಸಾಕಷ್ಟು ಭಾರಿ ಸಿಎಂ ಸಿದ್ದರಾಮಯ್ಯ ಅವರ ಗಮನಕ್ಕೆ ತಂದಾಗ್ಯೂ, ಅವರು ಈ ಬಗ್ಗೆ ಗಮನಹರಿಸದಿರುವುದು ಹಾಗೂ ಈ ಅನ್ಯಾಯದ ವಿರುದ್ಧ ಹೋರಾಟಕ್ಕಿಳಿದ ರೈತರು, ಸಾರ್ವಜನಿಕರು, ಮಠಾಧೀಶರುಗಳ ಮೇಲೆ ಪ್ರಕರಣ ದಾಖಲಿಸಿ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡಿರುವುದು ವಿಷಾದನೀಯ ಸಂಗತಿ. ಈ ಯೋಜನೆಯಿಂದ ರೈತರಿಗೆ ಆಗುತ್ತಿರುವ ಅನ್ಯಾಯ, ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಲು ಈ ಭಾಗದ ಎಲ್ಲಾ ಜನಪ್ರತಿನಿಧಿಗಳ ಸಭೆಯನ್ನು ಉಪ ಮುಖ್ಯಮಂತ್ರಿಗಳು ಹಾಗೂ ನೀರಾವರಿ ಸಚಿವರ ಉಪಸ್ಥಿತಿಯಲ್ಲಿ ಏರ್ಪಡಿಸುವಂತೆ ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಕೋರುತ್ತೇನೆ ಎಂದಿದ್ದಾರೆ.

Previous articleಹೆಚ್.ಕೆ.ಪಾಟೀಲರ ಆಸಕ್ತಿಯಿಂದಾಗಿ ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರ ರಚನೆ
Next articleಅಧಿಕಾರಿಗಳ ಆತ್ಮಸ್ಥೈರ್ಯ ಕುಗ್ಗಿಸಬೇಡಿ