Home ನಮ್ಮ ಜಿಲ್ಲೆ ಹೊತ್ತಿ ಉರಿದ ಬಸ್‌: ಪ್ರಯಾಣಿಕರು ಪಾರು

ಹೊತ್ತಿ ಉರಿದ ಬಸ್‌: ಪ್ರಯಾಣಿಕರು ಪಾರು

0

ಬೆಳಗಾವಿ: ಸಂಚರಿಸುತ್ತಿದ್ದ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಬಸ್ಸಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಬಸ್‌ ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಜಿಲ್ಲೆಯ ಹತ್ತರಗಿ ಟೋಲ್ ನಾಕಾ ಸಮೀಪ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಜೆ ಜರುಗಿದೆ.
ಕೊಲ್ಲಾಪೂರ ಕಡೆಯಿಂದ ಬೆಳಗಾವಿ ಕಡೆಗೆ ಗುರುವಾರ ಸಂಜೆ ವೇಳೆ ರಾಜ್ಯ ಸಾರಿಗೆ ಸಂಸ್ಥೆಯ ಬಸ್‌ ಹುಕ್ಕೇರಿ ತಾಲೂಕಿನ ಹಂಚಿನಾಳ ಕ್ರಾಸ್ ಬಳಿ ಇರುವ ಗುಲಾಬಶಾವಲಿ ದರ್ಗಾ ಬಳಿಯ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಸಂಚರಿಸುತ್ತಿರುವಾಗ ಆಕಸ್ಮಿಕವಾಗಿ ಬಸ್ಸಿಗೆ ಬೆಂಕಿ ತಗುಲಿಕೊಂಡಿದೆ. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಬಸ್ಸಿನಿಂದ ಕೆಳಗೆ ಇಳಿದು ಓಡಿ ಹೋಗಿದ್ದಾರೆ ಎನ್ನಲಾಗಿದೆ. ಅದೃಷ್ಟವಶಾತ ಇದರಿಂದ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ಘಟನೆಯ ವಿಷಯ ತಿಳಿದ ಅಗ್ನಿಶಾಮಕದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬಸ್‌ನ ಬೆಂಕಿ ನಂದಿಸುವಷ್ಟರಲ್ಲಿ ಬಸ್‌ ಸಂಪೂರ್ಣ ಸುಟ್ಟು ಕರಕಲಾಗಿದೆ. ಈ ಕುರಿತು ಯಮಕನಮರಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version