ಹೊಸ ಪಡಿತರ ಕಾರ್ಡ್​ ವಿತರಣೆಗೆ ಸೂಚನೆ

0
14

ಬೆಂಗಳೂರು: ಹೊಸದಾಗಿ ಪಡಿತರ ಕಾರ್ಡ್ ವಿತರಣೆಗೆ ಸೂಚನೆ ನೀಡಲಾಗಿದೆ ಎಂದು ಆಹಾರ ಸಚಿವ ಕೆ.ಹೆಚ್​ ಮುನಿಯಪ್ಪ ಹೇಳಿದರು. ನೀತಿ ಸಂಹಿತಿ ಜಾರಿ ಹಿನ್ನೆಲೆ ರೇಷನ್​​ ಕಾರ್ಡ್​ ವಿತರಣೆ ಸ್ಥಗಿತವಾಗಿತ್ತು. ಹೊಸದಾಗಿ ಪಡಿತರ ಕಾರ್ಡ್ ವಿತರಣೆಗೆ ಸೂಚನೆ ನೀಡಲಾಗಿದೆ. ಹೊಸದಾಗಿ BPL​, APL​ ಕಾರ್ಡ್​ಗೆ ಅರ್ಜಿ ಸಲ್ಲಿಸಬಹುದು ಎಂದು ಬೆಂಗಳೂರಿನಲ್ಲಿ ಆಹಾರ ಸಚಿವ ಕೆ.ಹೆಚ್​.ಮುನಿಯಪ್ಪ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಟಿ ನಡೆಸಿದ ಸಚಿವ ಮುನಿಯಪ್ಪ, ಹೊಸ ಪಡಿತರ ಕಾರ್ಡ್ ವಿತರಣೆ ಸಂಬಂಧ ಮಾಹಿತಿ ನೀಡಿದರು. ಅನ್ನಭಾಗ್ಯದ ಉದ್ದೇಶ ಹಸಿದವರಿಗೆ ಅನ್ನ ಕೊಡಬೇಕು ಅಂತ. ಈವರೆಗೆ ಒಂದು ಕೋಟಿ ಕುಟುಂಬಗಳಿಗೆ ಹಣ ಹಾಕಲಾಗಿದೆ ಎಂದು ಹೇಳಿದರು. ಈಗ ಹೊಸ ಪಡಿತರ ಕಾರ್ಡ್​ ವಿತರಣೆಗೆ ಅಧಿಕಾರಿಗಳಿಗೆ ಸೂಚಿಸಿದ್ದೇವೆ. ಜೊತೆಗೆ ಪಡಿತರ ಕಾರ್ಡ್​ಗೆ ಹೊಸ ಸದಸ್ಯರ ಹೆಸರು ಸೇರ್ಪಡೆಗೆ ಅವಕಾಶ ನೀಡಲಾಗಿದೆ ಎಂದರು.

Previous articleಉಡುಪಿ ವಿಡಿಯೋ ಪ್ರಕರಣ: ಪ್ರತಿಭಟನಕಾರರ ವಿರುದ್ಧ FIR
Next articleಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್‌ ವೈರಲ್‌