ಕುಷ್ಟಗಿ: ೨೦೨೮ರ ವರಗೆ ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇರುವುದಿಲ್ಲ, ಇದನ್ನು ಎಲ್ಲರೂ ಅರ್ಥ ಮಾಡಿಕೊಂಡರೆ ಸೂಕ್ತ ಎನಿಸುತ್ತಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯನವರ ರಾಜೀನಾಮೆಗೆ ಒತ್ತಡ ಬಿಜೆಪಿಯವರು ಹಾಕಿದರೂ ಯಾವುದೇ ಪ್ರಯೋಜನವಾಗುವುದಿಲ್ಲ. ಹೀಗಾಗಿ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವ ಪ್ರಶ್ನೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಹುನುಗುಂದ ತಾಲೂಕಿನ ಹಿರೇಶಿವನಗುತ್ತಿಗೆ ತೆರಳುವ ಮಾರ್ಗದ ಮಧ್ಯದ ಕುಷ್ಟಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಮ್ಮ ಸರ್ಕಾರವನ್ನು ಉರುಳಿಸಲು ವ್ಯವಸ್ಥಿತ ಹುನ್ನಾರವನ್ನು ಬಿಜೆಪಿ-ಜೆಡಿಎಸ್ ನಾಯಕರು ಮಾಡುತ್ತಿದ್ದಾರೆ. ರಾಜ್ಯಪಾಲರು, ರಾಜಭವನವನ್ನು ದುರ್ಬಳಕೆ ಮಾಡಿಕೊಂಡು ಚುನಾಯಿತ ಸರ್ಕಾರವನ್ನು ದುರ್ಬಲಗೊಳಿಸಲು ಯತ್ನಿಸುತ್ತಿದ್ದಾರೆ. ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಿ ಬೇಗ ಓಡಿ ಹೋಗಿ ಆ ಕುರ್ಚಿಯಲ್ಲಿ ಕೂರುವ ಆಸೆಯನ್ನು ಕೆಲವರು ಇಟ್ಟುಕೊಂಡಿದ್ದಾರೆ. ಆದರೆ, ಅದು ಆಗುವುದಿಲ್ಲ ಎಂದರು.