Home ಅಪರಾಧ ೯೮.೬೮ ಲಕ್ಷ ಮೌಲ್ಯದ ಅಕ್ರಮ ಚಿನ್ನ ವಶ

೯೮.೬೮ ಲಕ್ಷ ಮೌಲ್ಯದ ಅಕ್ರಮ ಚಿನ್ನ ವಶ

0

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುದನಾಳದಲ್ಲಿ ಬಚ್ಚಿಟ್ಟು ೯೮.೬೮ ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಪ್ರಯಾಣಿಕನನ್ನು ಅಧಿಕಾರಿಗಳು ಬಂಧಿಸಿದ್ದಾರೆ.
ಜ. ೮ರಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ Iಘಿ ೮೧೬ ಮೂಲಕ ಅಬುಧಾಬಿಯಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಪ್ರಯಾಣಿಕನ ಅನುಮಾನಾಸ್ಪದ ಚಲನವಲನದ ಆಧಾರದ ಮೇಲೆ, ಕಸ್ಟಮ್ಸ್ ಅಧಿಕಾರಿಗಳು ಪರಿಶೀಲಿಸಿದ್ದಾರೆ, ಈ ವೇಳೆ ಗುದನಾಳದಲ್ಲಿ ಚಿನ್ನವನ್ನು ಬಚ್ಚಿಟ್ಟು ಪೇಸ್ಟ್ ರೂಪದಲ್ಲಿ ೫ ಅಂಡಾಕಾರದ ವಸ್ತುಗಳಲ್ಲಿ ಕಳ್ಳಸಾಗಣೆ ಮಾಡುತ್ತಿರುವುದು ಪತ್ತೆಯಾಗಿದೆ.
೨೪ ಕ್ಯಾರೆಟ್‌ನ ೧,೫೭೯ ಗ್ರಾಂ ಚಿನ್ನ ಪತ್ತೆಯಾಗಿದೆ. ವಶಪಡಿಸಿಕೊಂಡ ಚಿನ್ನದ ಮೌಲ್ಯ ರೂ. ೯೮,೬೮,೭೫೦ ರೂ. ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿಯನ್ನು ವಿಚಾರಣೆಗೊಳಪಡಿಸಲಾಗಿದೆ.

Exit mobile version