ಅಂಕಿತಾ ಭೇಟಿಯಾಗಲಿರುವ ಡಿಕೆಶಿ

ಸರ್ಕಾರಿ ಶಾಲೆ ಮಕ್ಕಳು ಯಾರಿಗೂ ಕಮ್ಮಿ ಇಲ್ಲ ಎಂಬುದನ್ನು ಅಂಕಿತಾ ಅವರು ನಿರೂಪಿಸಿದ್ದಾರೆ.‌ ನೀವು ಹಾಗೂ ನಿಮ್ಮ ಶಾಲೆ ಬಗ್ಗೆ ಇಡೀ ಕರ್ನಾಟಕವೇ ಹೆಮ್ಮೆಪಡುತ್ತಿದೆ.

ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳು ಯಾರಿಗೂ ಕಮ್ಮಿ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಹೇಳಿದ್ದಾರೆ,
ಎಸ್‌ಎಸ್‌ಎಲ್‌ಸಿ ಫಲಿತಾಂಶ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ SSLC ಪರೀಕ್ಷೆಯಲ್ಲಿ ರಾಜ್ಯಕ್ಕೇ ಪ್ರಥಮ ಸ್ಥಾನ ಪಡೆದ ಬಾಗಲಕೋಟೆಯ ಮುಧೋಳ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಅವರಿಗೆ, ಆಕೆಯ ಶಿಕ್ಷಕರಿಗೆ ನನ್ನ ಹೃದಯಪೂರ್ವಕ ಶುಭಾಶಯಗಳು. ಸರ್ಕಾರಿ ಶಾಲೆ ಮಕ್ಕಳು ಯಾರಿಗೂ ಕಮ್ಮಿ ಇಲ್ಲ ಎಂಬುದನ್ನು ಅಂಕಿತಾ ಅವರು ನಿರೂಪಿಸಿದ್ದಾರೆ.‌ ನೀವು ಹಾಗೂ ನಿಮ್ಮ ಶಾಲೆ ಬಗ್ಗೆ ಇಡೀ ಕರ್ನಾಟಕವೇ ಹೆಮ್ಮೆಪಡುತ್ತಿದೆ. ನಿಮ್ಮನ್ನು ಆದಷ್ಟು ಬೇಗನೆ ಭೇಟಿಯಾಗುತ್ತೇನೆ ಎಂದಿದ್ದಾರೆ.