ಚಿಕ್ಕಮಗಳೂರು: ಪೆಂಗಲ್ ಚಂಡಮಾರುತದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಡಿ. 3 ಹಾಗೂ 4ರಂದು ಬಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಡಿ. 3ರಂದು ಅರೆಂಜ್ ಅಲರ್ಟ್ ಹಾಗೂ 4ರಂದು ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಡಿ. 3ರಂದು ಜಿಲ್ಲೆಯ ಎಲ್ಲ ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಮಾಡಿ ಡಿಸಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ