ಮಂಗಳೂರು : ಮಂಗಳೂರು ನಗರದಲ್ಲಿ ಪಾರ್ಕಿಂಗ್ ಮಾಡಿದ್ದ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಂಕನಾಡಿ ರೈಲ್ವೇಸ್ಟೇಷನ್, ಮಾಲ್‌ಗಳು ಹಾಗೂ ಕಂಬಳ ಜಾತ್ರೆ ನಡೆಯುವ ಪ್ರದೇಶದಿಂದ ಬೈಕ್ ಕದಿಯುತ್ತಿದ್ದ ಮಣಿಕಂಠ ಎಂಬ ಖದೀಮನನ್ನು ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ಪೊಲೀಸರ ಕಾರ್ಯಾಚರಣೆಯಲ್ಲಿ ಕಂಕನಾಡಿ ನಗರ ಠಾಣಾ ಪೊಲೀಸರು ಪ್ರಕರಣದ ಪ್ರಮುಖ ಆರೋಪಿ ಶಿವಮೊಗ್ಗ ಜಿಲ್ಲೆಯ ಸೊರಬದ ಮಣಿಕಂಠ ಗೌಡ ಕೆ. (24) ಬಂಧಿಸಿದ್ದು, ಮಣಿಕಂಠ ಗೌಡನಿಂದ 20 ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ,
ಜಾತ್ರೆ, ಕಂಬಳೋತ್ಸವ, ಬಸ್ಸು ರೈಲ್ವೆ ನಿಲ್ದಾಣಗಳಲ್ಲಿ ನಿಲ್ಲಿಸಿ ಹೋಗಿರುವ ಬೈಕ್ ಗಳನ್ನು ಕದಿಯುತ್ತಿದ್ದ, ವಾಹನಗಳ ಇಗ್ನಿಷನ್ ಸಾಕೆಟ್ ನ ಪ್ಲಗನ್ನು ಚಾಕಚಕ್ಯತೆಯಿಂದ ತಪ್ಪಿಸಿ, ಕ್ಷಣಾರ್ಧದಲ್ಲಿ ಕಳ್ಳತನ ಮಾಡಿಕೊಂಡು ಹೋಗುತಿದ್ದ,
ಹೀರೋ ಹೋಂಡಾ ಸ್ಪ್ಲೆಂಡರ್ ಬೈಕ್ ಗಳಿಗೆ ರೀಸೇಲ್ ವ್ಯಾಲ್ಯೂ ಇರುವುದರಿಂದ ಅದನ್ನೇ ಟಾರ್ಗೆಟ್ ಮಾಡುತ್ತಿದ್ದ ಈತ
ಕುಟುಂಬದೊಂದಿಗೆ ಮೂಡಬಿದ್ರೆಯಲ್ಲಿ ವಾಸ್ತವವ್ಯವಿದ್ದ, ಕದ್ದ ಬೈಕ್ ಗಳನ್ನು ಮಾರಾಟ ಮಾಡುತ್ತಿದ್ದ ಕಾರ್ಕಳ ದ ಸತೀಶ್ ಬಂಗೇರ, ಮೂಡಬಿದ್ರೆಯ ದೀಕ್ಷಿತ್ , ತಾಳಿಕೋಟೆಯ ಸಂಗಣ್ಣ ಹೊನ್ನಳ್ಳಿ ಎಂಬರನ್ನು ಸಹ  ಪೊಲೀಸರು ಬಂಧಿಸಿದ್ದಾರೆ.
                























