ಅಂತಿಮ ಗೆಲುವು ಸತ್ಯದ್ದೇ

0
13

ಬೆಂಗಳೂರು: ಅಂತಿಮ ಗೆಲುವು ಸತ್ಯದ್ದೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.


ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಸಂವಿಧಾನ ಮತ್ತು ನ್ಯಾಯಾಂಗ ವ್ಯವಸ್ಥೆಯ ಮೇಲೆ ಅಪಾರ ನಂಬಿಕೆಯಿಟ್ಟಿರುವ, ಈ ನೆಲದ ಕಾನೂನನ್ನು ಗೌರವಿಸುವ ಓರ್ವ ಪ್ರಜೆಯಾಗಿ ಸುಳ್ಳು ಪ್ರಕರಣದಲ್ಲಿ ನನ್ನ ಮೇಲೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ರಾಜಕೀಯ ಪ್ರೇರಿತ ನಿರ್ಣಯದ ವಿರುದ್ಧ ಘನ ಉಚ್ಛ ನ್ಯಾಯಾಲಯದ ಮೊರೆ ಹೋಗಿದ್ದೇನೆ. ಉಚ್ಚ ನ್ಯಾಯಾಲಯವು ಈ ವಿಚಾರವನ್ನು ಆಲಿಸಿ, ಮುಂದಿನ ವಿಚಾರಣೆಯ ವರೆಗೆ ವಿಶೇಷ ನ್ಯಾಯಾಲಯಗಳು ವಿಚಾರಣೆ ಮುಂದೂಡಬೇಕು, ಯಾವುದೇ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬಾರದು ಎಂಬ ಮಧ್ಯಂತರ ಆದೇಶವನ್ನು ನೀಡಿದೆ. ನ್ಯಾಯಾಲಯದ ಈ ಆದೇಶವನ್ನು ವಿನಮ್ರವಾಗಿ ಸ್ವೀಕರಿಸುತ್ತ ನನ್ನ ಧನ್ಯವಾದ ಸಲ್ಲಿಸುತ್ತೇನೆ. ಅಂತಿಮ ಗೆಲುವು ಸತ್ಯದ್ದೇ ಆಗಿರಲಿದೆ ಎಂಬುದು ನನ್ನ ದೃಢ ನಂಬಿಕೆಯಾಗಿದೆ ಎಂದಿದ್ದಾರೆ.

Previous articleಮಾಲ್‌ಗಳಿಗೆ ಬಾಂಬ್ ಬೆದರಿಕೆ
Next articleದೇಶದಲ್ಲಿ ಬಾಂಗ್ಲಾದಂತೆ ಅರಾಜಕತೆ ಸೃಷ್ಟಿಸುವ ಉದ್ದೇಶ ಕಾಂಗ್ರೆಸ್‌ನದ್ದು