Home ತಾಜಾ ಸುದ್ದಿ ಅಂಬೇಡ್ಕರ್‌ಗೆ ಅಪಮಾನ: ಶಾ ವಿರುದ್ಧ ಹಕ್ಕುಚ್ಯುತಿ ನೋಟಿಸ್ ನೀಡಿದ ಖರ್ಗೆ

ಅಂಬೇಡ್ಕರ್‌ಗೆ ಅಪಮಾನ: ಶಾ ವಿರುದ್ಧ ಹಕ್ಕುಚ್ಯುತಿ ನೋಟಿಸ್ ನೀಡಿದ ಖರ್ಗೆ

0

ನವದೆಹಲಿ: ಡಾ. ಬಿ.ಆರ್ ಅಂಬೇಡ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಇಂದು ವಿಶೇಷ ಹಕ್ಕುಚ್ಯುತಿ ನೋಟಿಸ್ ಸಲ್ಲಿಸಿದ್ದಾರೆ.
ಡಿಸೆಂಬರ್ 17ರಂದು ರಾಜ್ಯಸಭೆಯಲ್ಲಿ ಅಮಿತ್ ಶಾ ಅವರಿಂದ ಸಂವಿಧಾನದ ಶಿಲ್ಪಿಗೆ ಅವಮಾನವಾಗಿದೆ. ಅಲ್ಲದೇ ಅವರು ಸದನದ ನಿಯಮವನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಖರ್ಗೆ ಟೀಕಿಸಿದ್ದಾರೆ.
“ರಾಜ್ಯಸಭೆಯ ಕಾರ್ಯವಿಧಾನ ಮತ್ತು ವ್ಯವಹಾರದ ನಿಯಮಗಳ ನಿಯಮ 188ರ ಅಡಿಯಲ್ಲಿ ಗೃಹ ವ್ಯವಹಾರಗಳ ಸಚಿವರಾದ ಅಮಿತ್ ಶಾ ವಿರುದ್ಧ ನಾನು ವಿಶೇಷ ಹಕ್ಕುಗಳ ಪ್ರಶ್ನೆಯ ನೋಟಿಸ್ ಅನ್ನು ಈ ಮೂಲಕ ನೀಡುತ್ತೇನೆ” ಎಂದು ಮಲ್ಲಿಕಾರ್ಜುನ ಖರ್ಗೆ ನೋಟಿಸ್ ನೀಡಿದ್ದಾರೆ.

Exit mobile version