ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿಗೆ ಲೋಕಾಯುಕ್ತ ದಾಳಿ

0
109

ಕಲಬುರಗಿ: ನಗರದ ಸೇಡಂ ರಸ್ತೆಯಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಬುಧವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಶೋಧ ಕಾರ್ಯ ನಡೆಸಿದರು.
ಭೂ ಒಡೆತನ ಯೋಜನೆಗಳಲ್ಲಿ ಸರಿಯಾದ ಫಲಾನುಭವಿಗಳಿಗೆ ಭೂಮಿ ಒದಗಿಸದಿರುವುದು ಮತ್ತು ವಿವಿಧ ಯೋಜನೆಗಳಲ್ಲಿ ಫಲಾನುಭವಿಗಳಿಗೆ ವಿಳಂಬವಾಗುತ್ತಿರುವ ಬಗ್ಗೆ ಆರೋಪಗಳ ಹಿನ್ನೆಲೆಯಲ್ಲಿ ಸರ್ಚ್ ವಾರಂಟ್‌ನೊಂದಿಗೆ ಈ ದಾಳಿ ನಡೆಸಲಾಯಿತು ಎಂದು ಲೋಕಾ ಪೊಲೀಸ್ ಮೂಲಗಳು ತಿಳಿಸಿವೆ.
ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ಎರಡು ತಂಡಗಳ ಕಚೇರಿಯಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸುತ್ತಿದ್ದು, ಶೋಧ ಕಾರ್ಯದಲ್ಲಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದು, ಮುಂದಿನ ಕ್ರಮಗಳನ್ನು ಕೈಗೊಳ್ಳಲು ತಯಾರಿ ನಡೆಸುತ್ತಿದ್ದಾರೆ. ಲೋಕಾಯುಕ್ತ ಎಸ್‌.ಪಿ ಬಿ.ಕೆ.ಉಮೇಶ್ ಅವರ ನೇತೃತ್ವದಲ್ಲಿ ಡಿವೈಎಸ್ಪಿ ಗೀತಾ ಬೆನಾಳ್, ಇನ್‌ಸ್ಪೆಕ್ಟರ್ ರಾಜಶೇಖರ್ ಮತ್ತು ಸಿಬ್ಬಂದಿಯವರಾದ ಪ್ರದೀಪ್, ಬಸವರಾಜ್, ಮಲ್ಲಿನಾಥ್, ರಾಣೋಜಿ ಮತ್ತಿತರ ತಂಡ ದಾಳಿ ನಡೆಸಿದೆ.

Previous articleಗ್ಯಾರಂಟಿ ಅನುಷ್ಟಾನ ಸಮಿತಿ ರದ್ದತಿಗೆ ಬಿಜೆಪಿ- ಜೆಡಿಎಸ್ ಆಗ್ರಹ
Next articleನಕಲಿ ಪಡಿತರ ಚೀಟಿ: ಸೂಕ್ತ ಕ್ರಮಕ್ಕೆ ರಾಜ್ಯ ಸರ್ಕಾರಗಳಿಗೆ ಸೂಚನೆ