ಅಂಬೇಡ್ಕರ್ ನಾಮಫಲಕ ವಿಚಾರದಲ್ಲಿ ಘರ್ಷಣೆ: ಗ್ರಾಮ ಉದ್ವಿಗ್ನ

0
10

ಮೈಸೂರು: ಎರಡು ಕೋಮುಗಳ ನಡುವೆ ಅಂಬೇಡ್ಕರ್ ನಾಮಫಲಕ ವಿಚಾರದಲ್ಲಿ ಘರ್ಷಣೆ ನಡೆದ ಘಟನೆ ನಂಜನಗೂಡು ತಾಲೂಕಿನ ಹಲ್ಲರೆ ಗ್ರಾಮದಲ್ಲಿ ನಡೆದಿದೆ.
ಕೆಲ ಕಿಡಿಗೇಡಿಗಳು ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದ್ದು, ಮನೆ ಮುಂದೆ ನಿಲ್ಲಿಸಿದ್ದ ವಾಹನಗಳು ಜಖಂ ಆಗಿದೆ. ಅಲ್ಲದೇ ಹಲವರು ಕಲ್ಲು ತಗುಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದರಿಂದಾಗಿ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.
ಸ್ಥಳಕ್ಕೆ ನಂಜನಗೂಡು ಗ್ರಾಮಾಂತರ ಪೊಲೀಸರು, ಎಸ್​​ಪಿ ಸೀಮಾ ಲಾಟ್ಕರ್ ದೌಡಾಯಿಸಿದ್ದಾರೆ. ಘಟನೆ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous articleಮತ್ತೆ ೫ ವರ್ಷ ಸಿಮಿ ನಿಷೇಧ
Next articleಹಳೆ ತತ್ವ ಹೊಸ ಯುಕ್ತಿಗಳ ಹದ ಮಿಶ್ರಣ