ಅಂಬ್ಯುಲೆನ್ಸ್ ಆದ ಖಾಸಗಿ ಬಸ್: ವಿದ್ಯಾರ್ಥಿಯ ಜೀವ ಉಳಿಸಿದ ಬಸ್‌ ಚಾಲಕ ಹಾಗೂ ನಿರ್ವಾಹಕ

0
12

ಮಂಗಳೂರು: ಬಸ್​​ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗೆ ಹೃದಯಾಘಾತವಾಗಿದ್ದು, ಬಸ್ ಚಾಲಕ ಹಾಗೂ ನಿರ್ವಾಹಕನ ಸಮಯ ಪ್ರಜ್ಞೆಯಿಂದ ಜೀವ ರಕ್ಷಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಕೃಷ್ಣ ಪ್ರಸಾದ್ ಎಂಬ ವಿದ್ಯಾರ್ಥಿಗೆ ಪ್ರಯಾಣದ ವೇಳೆ ಹಠಾತ್ ಹೃದಯಾಘಾತದ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ. ತಕ್ಷಣವೇ ಬಸ್ ಚಾಲಕ ಗಜೇಂದ್ರ ಕುಂದರ್ ಮತ್ತು ಕಂಡಕ್ಟರ್ ಮಹೇಶ್ ಪೂಜಾರಿ ಅವರು ಬಸ್​​ನಲ್ಲಿದ್ದ ಎಮರ್ಜೆನ್ಸಿ ಸೈರನ್ ಚಾಲೂ ಮಾಡಿದ ಅವರು ಕೇವಲ 6 ನಿಮಿಷಗಳಲ್ಲಿ 6 ಕಿಲೋಮೀಟರ್ ದೂರ ಕ್ರಮಿಸಿ ಕಂಕನಾಡಿಯ ಫಾದರ್ ಮುಲ್ಲರ್ ಆಸ್ಪತ್ರೆಗೆ ತಲುಪಿಸಿದ್ದಾರೆ, ಇದರಿಂದಾಗಿ ವಿದ್ಯಾರ್ಥಿಯನ್ನು ರಕ್ಷಿಸಲು ಸಾಧ್ಯವಾಯಿತು. ಪರಿಣಾಮವಾಗಿ ವಿದ್ಯಾರ್ಥಿಯ ಜೀವ ಉಳಿಯಿತು. ಚಾಲಕ ಮತ್ತು ನಿರ್ವಾಹಕನ ಸಮಯ ಪ್ರಜ್ಞೆಗೆ ಮತ್ತು ಮಾನವೀಯತೆಗೆ ಇದೀಗ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Previous articleಅಂತಾರಾಜ್ಯ ಗಾಂಜ ಮಾರಾಟಗಾರನ ಬಂಧನ
Next articleವಯನಾಡ್ ಭೂಕುಸಿತ: ಸಾವಿನ ಸಂಖ್ಯೆ 148ಕ್ಕೆ ಏರಿಕೆ