Home ಅಪರಾಧ ಅಕ್ರಮ ಗೋ ಸಾಗಾಟ: ಇಬ್ಬರ ಬಂಧನ

ಅಕ್ರಮ ಗೋ ಸಾಗಾಟ: ಇಬ್ಬರ ಬಂಧನ

0

ಬೆಳ್ತಂಗಡಿ: ಸಮರ್ಪಕವಾದ ದಾಖಲೆಗಳಿಲ್ಲದೆ ಅಕ್ರಮವಾಗಿ ಪಿಕಪ್ ವಾಹನದಲ್ಲಿ ದನ‌ಸಾಗಾಟವನ್ನು ಪತ್ತೆಹಚ್ಚಿದ್ದು ಚಾಲಕ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದು ದನಗಳನ್ನು ಹಾಗೂ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿಯ ಆರೋಪಿಗಳು ಕೊಟ್ಟಿಗೆಹಾರ ನಿವಾಸಿಗಳಾದ ಅಶ್ವಥ್ (34)ಹಾಗೂ ಸಚಿನ್ (27) ಎಂಬವರಾಗಿದ್ದಾರೆ. ಯಾವುದೇ ಪರವಾನಿಗೆಯಿಲ್ಲದೆ ಗೋ ಸಾಗಟ ನಡೆಯುತ್ತಿರುವ ಬಗ್ಗೆ ಬಂದ ಮಾಹಿತಿಯ ಹಿನ್ನಲೆಯಲ್ಲಿ ಬೆಳ್ತಂಗಡಿ ಪೊಲೀಸರು ಮಧ್ದಡ್ಕದಲ್ಲಿ ಪರಿಶೀಲನೆ ಮಡೆಸಿದಾಗ ಅಕ್ರಮ ಗೋ ಸಾಗಾಟ ಬೆಳಕಿಗೆ ಬಂದಿದೆ. ಕೆ.ಎ ಡಿ 6960 ನಂಬರಿನ ಗೂಡ್ಸ್ ವಾಹನದಲ್ಲಿ ಎರಡು ದನಗಳು, ಒಂದು ಕರು, ಹಾಗೂ ಒಂದು ಹೋರಿಯನ್ನು ಹಿಂಸಾತ್ಮಕವಾಗಿ ಸಗಾಟ ಮಾಡಲಾಗುತ್ತಿತ್ತು. ಆರೋಪಿಗಳ ಬಳಿ ಯಾವುದೇ ಸೂಕ್ತ ದಾಖಲೆಗಳು ಇಲ್ಲದ ಹಿನ್ನಲೆಯಲ್ಲಿ ಆರೋಪಿಗಳನ್ನು ಬಂಧಿಸಿದ ಪೊಲೀಸರು ದನಗಳನ್ನು ಹಾಗೂ ವಾಹನವನ್ನು ವಶಕ್ಕೆ ಪಡೆದಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Exit mobile version