ಅಗ್ನಿಕುಂಡ ಹಾಯ್ದು ಭಕ್ತಿ ಸಮರ್ಪಿಸಿದ ಸಚಿವ

ದಾವಣಗೆರೆ: ನಗರದ ಹಳೇಪೇಟೆಯಲ್ಲಿರುವ ಶ್ರೀ ವೀರಭದ್ರೇಶ್ವರ ಸ್ವಾಮಿಯ ರಥೋತ್ಸವ ಪ್ರಯುಕ್ತ ಶುಕ್ರವಾರ ನಡೆದ ಅಗ್ನಿಕುಂಡ ಹಾಯುವ ಉತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಮತ್ತವರ ಪುತ್ರ ಸಮರ್ಥ್ ಶಾಮನೂರು ಅಗ್ನಿಕುಂಡ ಹಾಯ್ದು ಭಕ್ತಿ ಸಮರ್ಪಿಸಿದರು.

ಶುಕ್ರವಾರ ಬೆಳಿಗ್ಗೆ 6 ಗಂಟೆಗೆ ನಡೆದ ಅಗ್ನಿಕುಂಡ ಹಾಯುವ ಕಾರ್ಯಕ್ರಮದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಮತ್ತವರ ಕುಟುಂಬದವರು ಅಗ್ನಿಕುಂಡ ಹಾಯ್ದರು.ಗುಗ್ಗಳವು ನಗರದ ರಾಜ ಬೀದಿಗಳಲ್ಲಿ ಸಂಚರಿಸಿತು.