ಅಗ್ನಿ ಅವಘಡ: ಸುಮಾರು 30 ಲಕ್ಷಕ್ಕೂ ಹೆಚ್ಚು ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿ

0
18

ಹಾವೇರಿ: ಆಕಸ್ಮಿಕ ಬೆಂಕಿ ತಗಲಿ ಐದಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮಗೊಂಡ ಘಟನೆ ಜಿಲ್ಲೆಯ ಹಿರೇಕೆರೂರು ತಾಲೂಕಿನ ಚಿಕ್ಕೇರೂರ ಗ್ರಾಮದಲ್ಲಿ ಶನಿವಾರ ನಡೆದಿದೆ.
ಅಗ್ನಿ ಅವಘಡದಲ್ಲಿ ಎಲೆಕ್ಟ್ರಿಕ್ ಅಂಗಡಿ, ಬೇಕರಿ, ಫುಟ್ ವೇರ್, ಹೋಟೆಲ್ ಹಾಗೂ ಗೋಬಿ ಮಂಚೂರಿ ಅಂಗಡಿ ಸುಟ್ಟು ಭಸ್ಮಗೊಂಡಿವೆ. ಮೊದಲು ಫುಟ್ ವೇರ್ ಅಂಗಡಿಯಲ್ಲಿ ದಟ್ಟ ಹೋಗೆ ಕಂಡು ಬಂದು ನಂತರ ಅಕ್ಕಪಕ್ಕದ ಅಂಗಡಿಗಳಿಗೆ ಬೆಂಕಿ ಆವರಿಸಿಕೊಂಡಿದೆ.
ಈ ಘಟನೆಯಲ್ಲಿ ಸುಮಾರು 30 ಲಕ್ಷ ರೂ., ಹೆಚ್ಚು ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿದೆ ಎಂದು ಅಂದಾಜಿಸಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ದೌಡಾಯಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.

Previous articleಇಲಾಖೆಗೆ ಸಂದಾಯವಾದ ರಾಜಸ್ವವೇ ಗುಳುಂ
Next articleವಿಪಕ್ಷ ನಾಯಕರಾಗಿ ರಾಹುಲ್ ಗಾಂಧಿ ಆಯ್ಕೆ