ನವದೆಹಲಿ: ಭಾರತದ ಅಗ್ನಿ ಕ್ಷಿಪಣಿಯ ಪಿತಾಮಹ ಖ್ಯಾತ ಡಿಆರ್‌ಡಿಒ ಕ್ಷಿಪಣಿ ವಿಜ್ಞಾನಿ ಪದ್ಮಭೂಷಣ ಪುರಸ್ಕೃತ ರಾಮ್ ನಾರಾಯಣ್ ಅಗರ್ವಾಲ್ ನಿಧನರಾಗಿದ್ದಾರೆ.

ರಾಮ್ ನಾರಾಯಣ್ ಅಗರ್ವಾಲ್ ಗುರುವಾರ ರಾತ್ರಿ ಹೈದರಾಬಾದ್ ನಲ್ಲಿ ವಯೋಸಹಜ ಅಸ್ವಸ್ಥತೆಯಿಂದ ನಿಧನರಾದರು. ಅವರಿಗೆ 83 ವರ್ಷ ವಯಸ್ಸಾಗಿತ್ತು. ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರಾಗಿದ್ದ ಅವರು, ದೇಶದ ಧೀರ್ಘಸಾಮರ್ಥ್ಯದ ಸಿಡಿತಲೆ ಕ್ಷಿಪಣಿ ಅಭಿವೃದ್ಧಿ ಯೋಜನೆಗೆ ಮಹತ್ವದ ಕೊಡುಗೆ ನೀಡಿದ್ದರು. ಅವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ.
