ಅತ್ಯಧಿಕ ತಾಪಮಾನ: ಬದಲಾದ ಕಚೇರಿ ಕೆಲಸದ ಸಮಯ

0
34

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಅತ್ಯಧಿಕ ತಾಪಮಾನ ಇರುವ ಜಿಲ್ಲೆಗಳಲ್ಲಿ ಕಚೇರಿ ಕೆಲಸದ ಸಮಯ ಬದಲಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಏಪ್ರಿಲ್ ಮತ್ತು ಮೇ ಈ ಎರಡು ತಿಂಗಳು ಅವಧಿಯಲ್ಲಿ ಸರ್ಕಾರಿ ಕಚೇರಿಗಳಿಗೆ ಬೆಳಗಿನ 8 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಕೆಲಸದ ಅವಧಿ ನಿಗದಿ ಮಾಡಲಾಗಿದೆ. ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್‌, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ ಹಾಗೂ ಯಾದಗಿರಿ ಜಿಲ್ಲೆಗಳು ಹಾಗೂ ಕಿತ್ತೂರು ಕರ್ನಾಕದ (ಬೆಳಗಾವಿ ವಿಭಾಗ) ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಈ ಬದಲಾವಣೆ ಅವಧಿ ಅನ್ವಯವಾಗಲಿದೆ.

Previous articleಭೂತನಾಥ ಗುಡ್ಡದಲ್ಲಿ ಅಸ್ಥಿಪಂಜರ ಪತ್ತೆ
Next articleಪರಿಷತ್ ಸ್ಥಾನಕ್ಕೆ ನಾಮನಿರ್ದೇಶನ ಬಗ್ಗೆ ಹೈಕಮಾಂಡ್ ಜೊತೆ ಚರ್ಚೆ