ಅಧಿಕಾರವೇ ಇಲ್ಲವಾದರೆ ಆ ಸರ್ಕಾರ ಏಕೆ ಇರಬೇಕು

0
14

ನವದೆಹಲಿ: ಕೇಂದ್ರದ ಬಳಿ ಅಧಿಕಾರವೇ ಇಲ್ಲವಾದರೆ ಆ ಸರ್ಕಾರ ಏಕೆ ಇರಬೇಕು ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಪ್ರಶ್ನಿಸಿದ್ದಾರೆ.
ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗಿರುವ ಅನುದಾನ ತಾರತಮ್ಯ ಖಂಡಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ರಾಜ್ಯ ಸರ್ಕಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿರುವ ಡಿ.ಕೆ. ಶಿವಕುಮಾರ್, “ರಾಜ್ಯಕ್ಕೆ ಅನುದಾನ ನೀಡುವ ಅಧಿಕಾರ ಹಣ ಕಾಸು ಆಯೋಗದ ಮುಂದೆ ಇದೆ. ಕೇಂದ್ರ ಸರ್ಕಾರದ ಕೈಯಲ್ಲಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ. ನಿಮ್ಮ ಬಳಿ ಅಧಿಕಾರವೇ ಇಲ್ಲವಾದರೆ ಸರ್ಕಾರ ಯಾಕಿರಬೇಕು? ರಾಜ್ಯಕ್ಕೆ ಅನ್ಯಾಯವಾಗಿರುವುದನ್ನು ಸರಿಪಡಿಸುವುದು ಕೇಂದ್ರ ಸರ್ಕಾರದ ಕೆಲಸವಲ್ಲವೇ?” ಎಂದು ಕೇಳಿದರು. ನಮ್ಮ ಜನರ ಬೆವರು, ತೆರಿಗೆ ನಮ್ಮ ಹಕ್ಕು. ಕರ್ನಾಟಕಕ್ಕೆ ನ್ಯಾಯ ಸಿಗಬೇಕು. ನಮ್ಮ ಪಾಲಿನ ಹಣ ನಮಗೆ ಸಿಗಬೇಕು. ಜನರ ಋಣ ತೀರಿಸಲು, ಬಡವರಿಗೆ ನ್ಯಾಯ ಒದಗಿಸಲು, ಬರದಲ್ಲಿ ತತ್ತರಿಸಿರುವ ಜನರ ಸಂಕಷ್ಟಕ್ಕೆ ಸ್ಪಂದಿಸಲು ನಾವು ಈ ಹೋರಾಟ ನಡೆಸಿದ್ದೇವೆ, ಕರ್ನಾಟಕ ರಾಜ್ಯದ ಇತಿಹಾಸದಲ್ಲೇ ಇದೊಂದು ಐತಿಹಾಸಿಕ ದಿನ. ಈ ಹೋರಾಟ ಮುಂದಿನ ಪೀಳಿಗೆಗೆ ಒಂದು ಸಾಕ್ಷಿಯಾಗಲಿದೆ. ಇಲ್ಲಿ ನಾನು ಹಾಗೂ ಮುಖ್ಯಮಂತ್ರಿ ಮಾತ್ರ ಬಂದು ಕೂತಿಲ್ಲ. ನಮ್ಮ ರಾಜ್ಯದ ಜನತೆ ಆರಿಸಿರುವ 138 ಶಾಸಕರು, ಪರಿಷತ್ ಸದಸ್ಯರು ಇಲ್ಲಿಗೆ ಬಂದು ರಾಜ್ಯದ ಜನರ ಪರವಾಗಿ ಹೋರಾಟ ಮಾಡುತ್ತಿದ್ದೇವೆ. ನಮ್ಮ ಜನರ ಬೆವರು, ತೆರಿಗೆ, ನಮ್ಮ ಹಕ್ಕು. ಕರ್ನಾಟಕಕ್ಕೆ ನ್ಯಾಯ ಸಿಗಬೇಕು, ನಮ್ಮ ಪಾಲಿನ ಹಣ ನಮಗೆ ಸಿಗಬೇಕು ಎಂದು ಈ ಹೋರಾಟ ಮಾಡುತ್ತಿದ್ದೇವೆ. ಜನರ ಋಣ ತೀರಿಸಲು, ಬಡವರಿಗೆ ನ್ಯಾಯ ಒದಗಿಸಲು, ಬರದಲ್ಲಿ ತತ್ತರಿಸಿರುವ ಜನರ ಹಸಿವು ನೀಗಿಸಲು ನಾವಿಲ್ಲಿ ಸೇರಿದ್ದೇವೆ”
ಬಿಜೆಪಿ ಸ್ನೇಹಿತರಿಗೆ ನಾನು ಕೇಳುವುದಿಷ್ಟೇ. ಜನ ನಿಮ್ಮ 26 ಸಂಸದರನ್ನು ಆರಿಸಿದ್ದಾರೆ. ನೀವು ಒಂದು ದಿನ ರಾಜ್ಯದ ಪರವಾಗಿ ಹೋರಾಟ ಮಾಡಲಿಲ್ಲ. ರಾಜ್ಯದ ಹಿತದ ಬಗ್ಗೆ ಸರ್ಕಾರದ ಮೇಲೆ ಒತ್ತಡ ಹಾಕಲಿಲ್ಲ. ಡಬಲ್ ಇಂಜಿನ್ ಸರ್ಕಾರ ಇದ್ದರೂ ಇಂಜಿನ್‌ಗಳು ಫೇಲ್ ಆದವು. ಮುಖ್ಯಮಂತ್ರಿಗಳು ನಿಮ್ಮನ್ನು ಕರೆದುಕೊಂಡು ಹೋದರೂ ನೀವು ಸರ್ಕಾರದ ಮುಂದೆ ತುಟಿ ಬಿಚ್ಚಲಿಲ್ಲ. ಹೀಗಾಗಿ ಗಾಂಧಿ ಪ್ರತಿಮೆ ಮುಂದೆ ನಿಂತು ನೀವು ಪ್ರತಿಭಟನೆ ಮಾಡುವ ನೈತಿಕತೆ ನಿಮಗಿಲ್ಲ. ನಾವು ನಮ್ಮ ರಾಜ್ಯದ ಜನರ ಬೆವರಿನ ಹಣ ಕೊಡಿ ಎಂದು ಕೇಳುತ್ತಿದ್ದೇವೆ. ದೇಶದಲ್ಲಿ ಕೇಂದ್ರ ಸರ್ಕಾರಕ್ಕೆ ಅತಿ ಹೆಚ್ಚು ಆದಾಯ ಪಾವತಿ ಮಾಡುತ್ತಿರುವ ರಾಜ್ಯ ಕರ್ನಾಟಕ. ಹೀಗಾಗಿ ನಾವು ನಮ್ಮ ಪಾಲನ್ನು ಕೇಳುತ್ತಿದ್ದೇವೆ” “ನಮ್ಮ ರಾಜ್ಯದಲ್ಲಿ ಬರ ಆವರಿಸಿದೆ. ನಮ್ಮ ಕೃಷಿ ಸಚಿವರು, ಕಂದಾಯ ಸಚಿವರು ಕೇಂದ್ರ ಸಚಿವರನ್ನು ಭೇಟಿ ಮಾಡಿ ಬರದ ವಿಚಾರವಾಗಿ ವರದಿ ನೀಡಿದ್ದಾರೆ. ನಮ್ಮ ಮುಖ್ಯಮಂತ್ರಿಗಳು, ಪ್ರಧಾನಮಂತ್ರಿ ಹಾಗೂ ಗೃಹಮಂತ್ರಿಯವರನ್ನು ಭೇಟಿ ಮಾಡಿ ಪರಿಹಾರ ಕೋರಿದ್ದಾರೆ. ಆದರೂ ಇದುವರೆಗೂ ನಯಾ ಪೈಸೆ ಪರಿಹಾರದ ಹಣ ಬಿಡುಗಡೆ ಮಾಡಿಲ್ಲ, ಕಳೆದ ವರ್ಷ ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಇದ್ದಾಗ ಕೇಂದ್ರ ಬಜೆಟ್‌ನಲ್ಲಿ ನಿರ್ಮಲಾ ಸೀತಾರಾಮನ್ ಅವರು ಅನೇಕ ಯೋಜನೆಗಳಿಗೆ ಅನುದಾನ ಘೋಷಣೆ ಮಾಡಿದ್ದರು. ಈ ಘೋಷಣೆಯಾಗಿ ಒಂದು ವರ್ಷವಾದರೂ ಇದುವರೆಗೂ ಒಂದು ರೂಪಾಯಿ ಕೂಡ ಬಿಡುಗಡೆ ಮಾಡಿಲ್ಲ. ಅವರ ಘೋಷಣೆಯಿಂದಾಗಿ ಬೊಮ್ಮಾಯಿ ಅವರು ತಮ್ಮ ಬಜೆಟ್ ನಲ್ಲಿ ಯೋಜನೆಗಳನ್ನು ಘೋಷಿಸಿದ್ದರು. ಈ ಘೋಷಣೆಯನ್ನು ಯಾಕೆ ಜಾರಿಗೊಳಿಸಲಿಲ್ಲ? ರಾಜ್ಯದಿಂದ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್ ನೀವು ಕರ್ನಾಟಕಕ್ಕೆ ನ್ಯಾಯ ಒದಗಿಸಿಲ್ಲ. ದಯಮಾಡಿ ನಮಗೆ ನ್ಯಾಯ ಒದಗಿಸಿ, ನಮ್ಮ ಹಣ ಖಾಲಿಯಾಗಿಲ್ಲ. ಸರ್ಕಾರ ನಡೆಸುವ ಸಾಮರ್ಥ್ಯ ನಮಗಿದೆ. ಕೇಂದ್ರ ಬಿಜೆಪಿ ಸರ್ಕಾರ ನಮ್ಮ ಪಾಲಿನ ಹಣ ನೀಡಲಿ ಸಾಕು, ನಮ್ಮ ರಾಜ್ಯಕ್ಕೆ ಆಗಿರುವ ಅನ್ಯಾಯದ ಬಗ್ಗೆ ಹೇಳಿದ್ದರೂ ಇವರು ಕಿವಿಗೆ ಹಾಕಿಕೊಂಡಿಲ್ಲ. ಹೀಗಾಗಿ ಹೋರಾಟ ಅನಿವಾರ್ಯ ಎಂದು ಉಪ ಮುಖ್ಯಮಂತ್ರಿ ಡಿಕೆಶಿ ಹೇಳಿದ್ದಾರೆ.

Previous articleಶಿಕಾರಿಪುರ: ಯುವಕನಿಗೆ ಚಾಕು ಇರಿತ
Next articleಹಳೇ ವೈಷಮ್ಯ: ಡಬಲ್ ಮರ್ಡರ್