ಬೆಂಗಳೂರು: ಕರ್ನಾಟಕ ಸೇರಿ ಮೂರು ರಾಜ್ಯಗಳ ಮಹಿಳಾ ಕಾಂಗ್ರೆಸ್ ಘಟಕಗಳಿಗೆ ನೂತನ ಅಧ್ಯಕ್ಷರಗಳನ್ನು ನೇಮಕ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ನೇಮಕವಾಗಿದ್ದಾರೆ ಇನ್ನುಳಿದಂತೆ ಚಂಡೀಗಢಕ್ಕೆ ನಂದಿತಾ ಹೂಡ, ಅರುಣಾಚಲ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಚುಕು ನಾಚಿ ನೇಮಕವಾಗಿದ್ದಾರೆ.























