ಕಾರವಾರ: ದ್ವೇಷ ಭಾಷಣ ಹಾಗೂ ಜಿಲ್ಲೆಯಲ್ಲಿ ಅಶಾಂತಿ ಮೂಡಿಸಲು ಯತ್ನ ಮಾಡಿರುವುದಾಗಿ ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಕುಮಟಾ ಪೊಲೀಸ್ ಠಾಣೆಯಲ್ಲಿ ಸುಮೋಟೋ ಪ್ರಕರಣ ದಾಖಲು ಮಾಡಲಾಗಿದ್ದು, ಐಪಿಸಿ ಸೆಕ್ಷನ್ 505, 153 ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬಾಬರಿ ಮಸೀದಿಯಂತೆ ದೇವಸ್ಥಾನಗಳ ಕುರುಹು ಇರುವ ಇತರ ಮಸೀದಿಗಳನ್ನು ಒಡೆಯುವುದಾಗಿ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಏಕವಚನ ಹಾಗೂ ಟೀಕಾಸ್ತ್ರ ಪ್ರಯೋಗಿಸಿದ್ದರು.