Home Advertisement
Home ತಾಜಾ ಸುದ್ದಿ ಅನನ್ಯ ಸಾಧನೆಗೆ ಶುಭ ಹಾರೈಸಿದ ಸಿಎಂ

ಅನನ್ಯ ಸಾಧನೆಗೆ ಶುಭ ಹಾರೈಸಿದ ಸಿಎಂ

0
129

52 ದಿನಗಳ ಕಾಲ ಏಕಾಂಗಿಯಾಗಿ ರೋವಿಂಗ್

ಬೆಂಗಳೂರು: ಅಟ್ಲಾಂಟಿಕ್ ಮಹಾಸಾಗರವನ್ನ ಸತತ 52 ದಿನಗಳ ಕಾಲ ಏಕಾಂಗಿಯಾಗಿ ರೋವಿಂಗ್ ಮಾಡುತ್ತಾ ದಾಟಿ ದಾಖಲೆಗೈದ ನಮ್ಮ ಬೆಂಗಳೂರು ಮೂಲದ ಅನನ್ಯ ಪ್ರಸಾದ್ ಅವರ ಸಾಧನೆ ಇಡೀ ದೇಶ ಹೆಮ್ಮೆಪಡುವಂತದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಅನನ್ಯ ಪ್ರಸಾದ್ ಸಾಧನೆ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ಈ ಸಾಧನೆಯ ಶಿಖರವನ್ನೇರಿದ ಯುವತಿ ಕನ್ನಡದ ರಾಷ್ಟ್ರಕವಿ ಡಾ.ಜಿ.ಎಸ್ ಶಿವರುದ್ರಪ್ಪ ಅವರ ಮೊಮ್ಮಗಳು ಎನ್ನುವುದು ಇನ್ನಷ್ಟು ಖುಷಿಯ ವಿಷಯ.

ಅನಾಥ ಮಕ್ಕಳಿಗೆ ಶಿಕ್ಷಣ ನೀಡುವ ಚಾಮರಾಜನಗರ – ರಾಮಸಮುದ್ರದ ದೀನಬಂಧು ಶಾಲೆಯ ಮಕ್ಕಳ ಭವಿಷ್ಯಕ್ಕಾಗಿ ಇಂಥದ್ದೊಂದು ಸಾಹಸಕ್ಕೆ ಕೈಹಾಕಿ ಯಶಸ್ವಿಯಾಗಿರುವ ಅನನ್ಯ ಪ್ರಸಾದ್‌ಗೆ ಅಭಿನಂದನೆಗಳು. ಇಂತಹ ನಿಸ್ವಾರ್ಥ ಆಲೋಚನೆಗಳು ನಿಮ್ಮನ್ನು ಜೀವನದಲ್ಲಿ ಮತ್ತಷ್ಟು ಎತ್ತರೆತ್ತರಕ್ಕೆ ಕೊಂಡೊಯ್ಯಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.