ಹೊಸದಿಲ್ಲಿ: ರಾಹುಲ್ ಗಾಂಧಿ ಅವರು ತಮ್ಮ ಟ್ವಿಟ್ಟರ್ ಖಾತೆಯ ಬಯೋ ಅನ್ನು ಅಪ್ಡೇಟ್ ಮಾಡಿದ್ದು. ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ದೋಷಿ ಆದ ಹಿನ್ನೆಲೆ ಸಂಸದ ಸ್ಥಾನದಿಂದ ಅನರ್ಹಗೊಂಡಿರುವ ರಾಹುಲ್ ಗಾಂಧಿ ತಮ್ಮ ಟ್ವಿಟರ್ ಬಯೋವನ್ನು ಬದಲಾಯಿಸಿದ್ದಾರೆ. ಬಯೋ ವಿಭಾಗದಲ್ಲಿ “ಸಂಸತ್ತಿನ ಸದಸ್ಯ” ಅನ್ನು ‘’ಅನರ್ಹಗೊಂಡ ಸಂಸದ’’ ಎಂದು ಬದಲಾಯಿಸಿಕೊಂಡಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಯನ್ನು ದಾಖಲಿಸಿದ್ದಾರೆ.