ಅನುದಾನದ ಬಗ್ಗೆ ಶ್ವೇತ ಪತ್ರ ಹೊರಡಿಸಲಿ

0
18

ಬೆಂಗಳೂರು: ರಾಜ್ಯಕ್ಕೆ ಬಂದಿರುವ ಅನುದಾನದ ಬಗ್ಗೆ ಶ್ವೇತ ಪತ್ರ ಹೊರಡಿಸಲಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಒಂದು ಸುಳ್ಳನ್ನ ನೂರು ಬಾರಿ ಹೇಳಿದರೆ ಅದು ಸತ್ಯವಾಗುವುದಿಲ್ಲ ಸಿಎಂ ಸಿದ್ದರಾಮಯ್ಯ ಅವರೇ. ಯುಪಿಎ ಅವಧಿಗೆ ಹೋಲಿಸಿದರೆ ಎನ್ ಡಿಎ ಅವಧಿಯಲ್ಲಿ ಕರ್ನಾಟಕಕ್ಕೆ 3 ಪಟ್ಟು ಹೆಚ್ಚು ಹಣ ದೊರೆತಿದೆ ಎನ್ನುವ ಸತ್ಯ ನಿಮಗೂ ಗೊತ್ತು. 14 ಬಜೆಟ್ ಮಂಡಿಸಿರುವ ಸ್ವಯಂ ಘೋಷಿತ ಆರ್ಥಿಕ ತಜ್ಞರಾದ ಸಿಎಂ ಸಿದ್ದರಾಮಯ್ಯ ಅವರು ಪದೇ ಪದೇ ರಾಜ್ಯದ ಜನತೆಯ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುವುದು ಬಿಟ್ಟು ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ, ಕಳೆದ 20 ವರ್ಷಗಳಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಬಂದಿರುವ ಒಟ್ಟು ಅನುದಾನ, ತೆರಿಗೆ ಹಂಚಿಕೆ ಬಗ್ಗೆ ಶ್ವೇತ ಪತ್ರ ಹೊರಡಿಸಲಿ ಎಂದಿದ್ದಾರೆ.

Previous articleಸಿಎಂ ಹಾದಿ ಹಿಡಿದ ಖರ್ಗೆ ಕುಟುಂಬ
Next articleಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ