Home News ಅನುದಾನ ಹಂಚಿಕೆಯಲ್ಲಿ ಕೇಂದ್ರ ಮಲತಾಯಿ ಧೋರಣೆ

ಅನುದಾನ ಹಂಚಿಕೆಯಲ್ಲಿ ಕೇಂದ್ರ ಮಲತಾಯಿ ಧೋರಣೆ

ದಾವಣಗೆರೆ: ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಅನುದಾನ ಹಂಚಿಕೆ ಮಾಡುವಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಆರೋಪಿಸಿದರು.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಿಂದ ೪ ರಿಂದ ೫ ಲಕ್ಷ ಕೋಟಿ ರೂ. ಕೇಂದ್ರಕ್ಕೆ ತೆರಿಗೆ ಪಾವತಿ ಮಾಡುತ್ತಿದ್ದರೂ, ಕರ್ನಾಟಕಕ್ಕೆ ಕೇಂದ್ರ ಸರ್ಕಾರ ೫೦ ಸಾವಿರ ಕೋಟಿ ರೂ. ಮಾತ್ರ ಕೊಡುತ್ತಿದೆ. ಅದನ್ನು ಸರಿಯಾದ ಸಮಯಕ್ಕೆ ಕೊಡದೆ ಅನ್ಯಾಯ ಮಾಡುತ್ತಿದೆ ಎಂದು ದೂರಿದರು.
ಕೇಂದ್ರ ಸರ್ಕಾರದ ಯಾವುದೇ ಯೋಜನೆಗಳು, ಕಾರ್ಯಕ್ರಮಗಳಿಗೆ ಸಮಯಕ್ಕೆ ಅನುಸಾರವಾಗಿ ಹಣ ಬಿಡುಗಡೆ ಮಾಡುತ್ತಿಲ್ಲ. ಇದು ಈಗಲ್ಲ, ಎನ್‌ಡಿಎ ಆಡಳಿತ ನಡೆಸಿಕೊಂಡು ಬಂದಾಗಿನಿಂದ ಈ ಅನ್ಯಾಯ ಮಾಡುತ್ತಿದ್ದು, ಈ ಬಗ್ಗೆ ಮುಖ್ಯಮಂತ್ರಿಗಳು, ಸಚಿವರು ಸಾಕಷ್ಟು ಹೋರಾಟ ಮಾಡಿದ್ದೇವೆ. ಮಾಧ್ಯಮಗಳಲ್ಲಿ ಅನೇಕ ಬಾರಿ ಹೇಳಿಕೆಗಳನ್ನು ನೀಡುತ್ತಿದ್ದೇವೆ. ಆದರೂ ಕೇಂದ್ರ ಸರ್ಕಾರ ಕರ್ನಾಟಕದ ಪಾಲಿನ ಹಣ ನೀಡುವುದರಲ್ಲಿ ತಾರತಮ್ಯ, ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿದರು.

ಪಂಚ ಪೀಠಾಧೀಶರು ಅಭಿನಂದನೆ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾದ ಡಾ.ಶಾಮನೂರು ಶಿವಶಂಕರಪ್ಪ ಅವರ ಅಧ್ಯಕ್ಷತೆಯಲ್ಲಿ ಪಂಚ ಪೀಠಾಧೀಶರರು ಒಂದಾಗಿರುವುದು, ಭಕ್ತರಿಗೆ, ಅಭಿಮಾನಿಗಳಿಗೆ ಬಹಳ ಖುಷಿ ತಂದಿದೆ. ಈ ವೇಳೆ ಶಾಮನೂರು ಶಿವಶಂಕರಪ್ಪ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು.

Exit mobile version