Home ತಾಜಾ ಸುದ್ದಿ ಅನೇಕ ವರ್ಷಗಳ ಯೋಜನೆಗಳಿಗೆ ಚಾಲನೆ: 39 ಸಾವಿರ ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದೆ

ಅನೇಕ ವರ್ಷಗಳ ಯೋಜನೆಗಳಿಗೆ ಚಾಲನೆ: 39 ಸಾವಿರ ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದೆ

0

ದಾವಣಗೆರೆ: ಕರ್ನಾಟಕದಲ್ಲಿ ಸುಮಾರು 40ರಿಂದ 50 ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ 39 ಸಾವಿರ ಕೋಟಿ ರೂ. ವೆಚ್ಚದ ರೈಲ್ವೆ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಕೇಂದ್ರ ರೈಲ್ವೆ ಇಲಾಖೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇ.15ರಂದು ಗದಗ-ಕುಷ್ಠಗಿ ರೈಲ್ವೆ ಯೋಜನೆ ಲೋಕಾರ್ಪಣೆ ಮಾಡುತ್ತೇವೆ. ಸಿಂಧನೂರು-ರಾಯಚೂರು, ಲೋಕಾಪುರ-ಕಾಚಿಗುಡ ರೈಲ್ವೆ ಯೋಜನೆ ಒಂದೂವರೆ ತಿಂಗಳಲ್ಲಿ ಪೂರ್ಣಗೊಳ್ಳಲಿದ್ದು, 2026, 2027, 2028ರ ಒಳಗೆ ಎಲ್ಲಾ ಹಳೆಯ ಯೋಜನಗಳನ್ನು ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.
ದಾವಣಗೆರೆ-ಚಿತ್ರದುರ್ಗ- ತುಮಕೂರು ನೇರ ರೈಲ್ವೆ ಮಾರ್ಗ ಯೋಜನೆಯ ಶೇ.85ರಷ್ಟು ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದೆ.ಇನ್ನು ಶೇ15ರಷ್ಟು ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆ ಮುಗಿಸಲಾಗುವುದು. ಈ ಸಂಬಂಧ ಮೇ.17 ರಂದು ರೈಲ್ವೆ ಇಲಾಖೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳ ಸಭೆ ಕರೆಯಲಾಗಿದೆ. ಸಂಸದ ಗೋವಿಂದ ಕಾರಜೋಳ, ರೈಲ್ವೆ ಇಲಾಖೆ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಇನ್ನು ಮುಂದೆ ಅಪ್ರೋಚ್ ರಸ್ತೆಗಳ ನಿರ್ಮಾಣಕ್ಕೆ ಭೂಸ್ವಾಧೀನ ರಾಜ್ಯ ಸರ್ಕಾರ ಮಾಡಬೇಕು. ಉಳಿದ ಎಲ್ಲಾ ಪ್ರಕ್ರಿಯೆಯನ್ಬು ಭಾರತ ಸರ್ಕಾರ ಮಾಡುತ್ತದೆ. ರೈಲ್ವೆ ಮೇಲ್ಸೇತುವೆ ಮತ್ತು ಕೆಳ ಸೇತುವೆ ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡಿಕೊಳ್ಳುವುದಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಲೇವಲ್ ಕ್ರಾಸಿಂಗ್ ಸಾಕಷ್ಟು ಸಮಸ್ಯೆಗಳಿಗೆ ಕಾರಣವಾಗುತ್ತದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿಯವರು ಲೇವಲ್ ಕ್ರಾಸಿಂಗ್ ಮುಕ್ತಿ ನೀಡುವಂತೆ ಆದೇಶ ನೀಡಿದ್ದು , ಮುಂದಿನ ದಿನಗಳಲ್ಲಿ ಲೇವಲ್ ಕ್ರಾಸಿಂಗ್ ಇರುವ ಕಡೆಗಳಲ್ಲಿ ಹಂತ ಹಂತವಾಗಿ ಕೆಳ ಅಥವಾ ಮೇಲ್ಸೇತುವೆ ನಿರ್ಮಾಣ ಮಾಡಿ ಆಗುವಂತಹ ಅಪಘಾತಗಳನ್ನು ತಗ್ಗಿಸುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.
ಹಿಂದಿಗಿಂತಲೂ ಈಗ ಅಪಘಾತಗಳ ಸಂಖ್ಯೆ ಕಡಿಮೆ ಆಗಿವೆ. ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಕವಚ್ ಯೋಜನೆ ರೂಪಿಸಲಾಗಿದೆ. ಒಂದು ಲಕ್ಷ ಕಿ.ಮೀ.ದೂರ ಹಳಿ ಇದೆ. ಕರ್ನಾಟಕದಲ್ಲಿ 1 ಸಾವಿರದಿಂದ 2 ಸಾವಿರ ಕಿ.ಮೀ. ದೂರ ಪ್ರಾಯೋಗಿಕವಾಗಿ ಕವಚ್ ಯೋಜನೆ ಪರೀಕ್ಷೆಗೆ ಒಳಪಡಿಸುತ್ತಿದ್ದೇವೆ. ಇದರಿಂದ ರೈಲುಗಳು ಎಷ್ಟೇ ವೇಗದಲ್ಲಿ ಬಂದರೂ 50 ಮೀಟರ್ ಅಂತರದಲ್ಲಿ ನಿಲ್ಲುತ್ತದೆ. ಇದರಿಂದ ಅಪಘಾತಗಳನ್ಬು ತಡೆಗಟ್ಟಬಹುದು ಎಂದು ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿಯವರಿಗೆ ಅನೇಕ ಬಾರಿ ಮಾಡಿದ್ದರಿಂದ ಕನ್ನಡ ಸೇರಿದಂತೆ 10 ಸ್ಥಳೀಯ ಭಾಷೆಗಳಲ್ಲಿ ರೈಲ್ವೆ ನೇಮಕಾತಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಆದರೆ ಬೇರೆ ರಾಜ್ಯಗಳ ಅಭ್ಯರ್ಥಿಗಳು ರೈಲ್ವೆ ನೇಮಕಾತಿ ಪರೀಕ್ಷೆ ಬರೆಯಲು ಆಸಕ್ತಿ ತೋರಿಸಿದಂತೆ ಕರ್ನಾಟಕದ ಅಭ್ಯರ್ಥಿಗಳು ಆಸಕ್ತಿ ತೋರಿಸುತ್ತಿಲ್ಲ. ಮುಂದಿನ ದಿನಗಳಲ್ಲಿ ಕರ್ನಾಟಕದ ಅಭ್ಯರ್ಥಿಗಳು ರೈಲ್ವೆ ನೇಮಕಾತಿ ಪರೀಕ್ಷೆ ಬರೆದು ಉದ್ಯೋಗ ಪಡೆದುಕೊಳ್ಳಬೇಕಂದು ಮನವಿ ಮಾಡಿದರು.

Exit mobile version