Home ತಾಜಾ ಸುದ್ದಿ ಅನ್ನದಾತನ ಅವಹೇಳನ ಸಲ್ಲ

ಅನ್ನದಾತನ ಅವಹೇಳನ ಸಲ್ಲ

0

ಬೆಂಗಳೂರು: ಅನ್ನದಾತನ ಕಷ್ಟ, ಸಂಕಷ್ಟಗಳ ಬಗ್ಗೆ ಅವಹೇಳನ ಮಾಡುವುದು ಸರಿಯಲ್ಲ ಎಂದು ಸಚಿವ ಶಿವಾನಂದ ಪಾಟೀಲ್ ವಿರುದ್ಧ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಗರಂ ಆಗಿದ್ದಾರೆ.
ಅನ್ನದಾತನ ಕಷ್ಟ, ಸಂಕಷ್ಟಗಳ ಬಗ್ಗೆ ಅವಹೇಳನ ಮಾಡುವುದು ಸರಿಯಲ್ಲ ಎಂದು ಸಚಿವ ಶಿವಾನಂದ ಪಾಟೀಲ್ ವಿರುದ್ಧ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಗರಂ ಆಗಿದ್ದಾರೆ
ನಾನು ಕೃಷಿಸಾಲ ಮನ್ನಾ ಮಾಡುವ ಮುನ್ನ ರಾಜ್ಯದಲ್ಲಿ ನಡೆದ ರೈತರ ಸರಣಿ ಆತ್ಮಹತ್ಯಾ ಕಾಂಡ ನೆನಪು ಮಾಡಿಕೊಂಡರೆ ಈಗಲೂ ಮೈ ನಡುಗುತ್ತದೆ. ಸಚಿವ ಶಿವಾನಂದ ಪಾಟೀಲ ಅವರು ರೈತರ ಬಗ್ಗೆ ನೀಡಿರುವ ಹೇಳಿಕೆ ಖಂಡನೀಯ. ಅನ್ನದಾತನ ಕಷ್ಟ, ಸಂಕಷ್ಟಗಳ ಬಗ್ಗೆ ಅವಹೇಳನ ಮಾಡುವುದು ಖಂಡಿತಾ ಸರಿಯಲ್ಲ. ಸಚಿವರು ಇಂಥ ವಿಷಯಗಳ ಬಗ್ಗೆ ಬಹಳ ಎಚ್ಚರಿಕೆ, ಸೂಕ್ಷ್ಮತೆ, ಸಂಯಮದಿಂದ ಮಾತನಾಡಬೇಕು, ಸಚಿವರು ಬೇಷರತ್ ಕ್ಷಮೆ ಕೇಳಬೇಕು, ತಮ್ಮ ಹೇಳಿಕೆಯನ್ನು ಕೂಡಲೇ ವಾಪಸ್ ಪಡೆಯಬೇಕು ಎಂದು ಟ್ವೀಟ್‌ ಮಾಡಿದ್ದಾರೆ.

Exit mobile version