ಹೈದರಾಬಾದ್: ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ಮುಂದಿನ 5 ವರ್ಷಗಳವರೆಗೆ ವಿಸ್ತರಿಸಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ನಗರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಜೆಟ್‌ನಲ್ಲಿ ಎಲ್ಲಾ ಸಮುದಾಯಕ್ಕೆ ನ್ಯಾಯ ಒದಗಿಸಲಾಗಿದೆ. ಯುವಕರು ರೈತರು, ಮಹಿಳಾ ಸಬಲೀಕರಣಕ್ಕೆ ಕೇಂದ್ರ ಸರ್ಕಾರ ಬದ್ಧವಾಗಿದೆ. 3ನೇ ಬಾರಿ ಮೋದಿಯವರು ಪ್ರಧಾನಿಯಾಗಿದ್ದಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ. 10 ವರ್ಷಗಳ ಕಾಲ ಯಶಸ್ವಿ ಆಡಳಿತ ನೀಡಿದ್ದೇವೆ. ನಿರುದ್ಯೋಗ ನಿವಾರಣೆಗೆ ಕ್ರಮ ಕೈಗೊಳ್ಳಲಾಗಿದೆ. ಬಜೆಟ್ ನಲ್ಲಿ ಎಲ್ಲ ಸಮುದಾಯಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡಿದ್ದೇವೆ. ಸಾಮಾಜಿಕ ನ್ಯಾಯಕ್ಕೆ ಒತ್ತು ಕೊಡಲಾಗಿದೆ ಎಂದರು. ವಿಶ್ವದ ಅತಿದೊಡ್ಡ ಆಹಾರ ಭದ್ರತಾ ಯೋಜನೆಯಾದ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ಮುಂದಿನ 5 ವರ್ಷಗಳವರೆಗೆ ವಿಸ್ತರಿಸಲಾಗಿದ್ದು, ಇದು 80 ಕೋಟಿಗೂ ಹೆಚ್ಚು ಜನರಿಗೆ ಪ್ರಯೋಜನವಾಗಲಿದೆ. ಒಟ್ಟಾರೆಯಾಗಿ ನಮ್ಮ ಆದ್ಯತೆಯು ಕೃಷಿ, ಉದ್ಯೋಗ, ಕೌಶಲ್ಯ, ಅಂತರ್ಗತ ಮಾನವ ಸಂಪನ್ಮೂಲ ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯ, ಉತ್ಪಾದನೆ ಮತ್ತು ಸೇವೆಗಳು, ನಗರಾಭಿವೃದ್ಧಿ ಮತ್ತು ಇಂಧನ ಭದ್ರತೆಯಲ್ಲಿ ಉತ್ಪಾದಕತೆ ಮತ್ತು ಸ್ಥಿತಿಸ್ಥಾಪಕತ್ವವಾಗಿದೆ ಎಂದರು.