Home ಅಪರಾಧ ಅಪರಿಚಿತ ವಾಹನ ಡಿಕ್ಕಿ ಇಬ್ಬರ ದುರ್ಮರಣ

ಅಪರಿಚಿತ ವಾಹನ ಡಿಕ್ಕಿ ಇಬ್ಬರ ದುರ್ಮರಣ

0

ಹುಬ್ಬಳ್ಳಿ: ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಎರಡು ದೇಹಗಳು ಛಿದ್ರ ಛಿದ್ರವಾದ ಘಟನೆ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಹುಬ್ಬಳ್ಳಿಯ ಹೊರವಲಯದಲ್ಲಿರುವ ಗೋಕುಲ ಗ್ರಾಮದ ಧಾರಾವತಿ ಹನುಮಂತ ದೇವಸ್ಥಾನದ ಬಳಿಯ ಬೈಪಾಸ್‌ನಲ್ಲಿ ನಡೆದ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.
ಮೃತ ಇಬ್ಬರೂ ವ್ಯಕ್ತಿಗಳ ಗುರುತು ಪತ್ತೆಯಾಗದ ರೀತಿಯಲ್ಲಿ ಛಿದ್ರವಾಗಿ ಬಿದ್ದಿವೆ. ಅಪಘಾತದಲ್ಲಿ ಸಾವನ್ನಪ್ಪಿದ ಇಬ್ಬರ ಬಗ್ಗೆ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Exit mobile version