‘ಅಪರೇಷನ್ ಸಿಂದೂರ್’ಗೆ ಧಿಕ್ಕಾರ ಹಾಕಿದ ವಿದ್ಯಾರ್ಥಿನಿ ವ್ಯಾಪಕ ಆಕ್ರೋಶ

ಮಂಗಳೂರು: ಪಾಕಿಸ್ತಾನದ ವಿರುದ್ಧ ಸೇನಾ ಕಾರ್ಯಾಚರಣೆ ‘ಅಪರೇಷನ್ ಸಿಂದೂರ್’ ನಡೆಸಿದ್ದಕ್ಕೆ ಶ್ಲಾಘನೆ ವ್ಯಕ್ತವಾಗಿದ್ದರೆ ಮಂಗಳೂರಿನ ಸ್ನಾತಕೋತ್ತರ ವಿದ್ಯಾರ್ಥಿನಿಯೊಬ್ಬಳು ಆಪರೇಶನ್ ಧಿಕ್ಕಾರ ಹಾಕಿ ಇನ್ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಡಿದ್ದು ಭಾರೀ ಆಕ್ರೋಶ ವ್ಯಕ್ತವಾಗಿದೆ.
ಬೆಳ್ತಂಗಡಿ ತಾಲೂಕಿನ ಬೆಳಾಲು ನಿವಾಸಿ ರೇಷ್ಮಾ ಎನ್ ಬಾರಿಗ ಎಂಬ ವಿದ್ಯಾರ್ಥಿನಿ ತನ್ನ ಇನ್ಸ್ಟಾಗ್ರಾಂ ಖಾತೆಯಲ್ಲಿ ಹ್ಯಾಷ್ ಟ್ಯಾಗ್ ‘ದಿಕ್ಕಾರ ಆಪರೇಷನ್ ಸಿಂದೂರ್’ ಮೇ ೮ರಂದುಜ ಪೋಸ್ಟ್ ಹಾಕಿದ್ದರು. ಇದಕ್ಕೆ ವಿರೋಧ ವ್ಯಕ್ತವಾಗುತ್ತಿದ್ದಂತೆ ರೇಷ್ಮಾ ಪೋಸ್ಟ್ ಡಿಲೀಟ್ ಮಾಡಿದ್ದಾರೆ.
ರೇಷ್ಮಾ ಪ್ರಸ್ತುತ ಮಂಗಳೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ಸ್ನಾತಕ್ಕೋತ್ತರ ಪದವಿ ವ್ಯಾಸಾಂಗ ಮಾಡುತ್ತಿದ್ದಾರೆ. ‘ನನ್ನ ಮನೆಯ ದೀಪಕ್ಕೆ ಅವನ ಮನೆಯ ಹಣತೆಯ ತಂದೆ, ಅಲ್ಲಿ ನಂದಿ ಹೋಯಿತು ಬೆಳಕು” “ಅವನ ಮನೆಯ ಬೆಳಕಿಗೆ ನನ್ನೊಳಗಿನ ದೀಪ ಬೆಳಕಿನ ವಿಜೃಂಭಣೆಗಾಗಿ ಹೋರಾಟ ಜಯಿಸಿದು ಕತಲು? ಎಲ್ಲೆಲ್ಲೂ ಕತ್ತಲು?!”#dikkaraoperationsindura ಹ್ಯಾಷ್ ಟ್ಯಾಗ್ ನಡಿ ಪೋಸ್ಟ್ ಹಾಕಿದ್ದಾರೆ. ಇದಕ್ಕೆ ವಿರೋಧ ವ್ಯಕ್ತವಾಗುತ್ತಿದ್ದಂತೆ ರೇಷ್ಮಾ ಪೋಸ್ಟ್ ಡಿಲೀಟ್ ಮಾಡಿದ್ದಾರೆ.

ಸಮರ್ಥನೆ: ಪೋಸ್ಟ್ ವೈರಲ್ ಆದ ಬೆನ್ನಲ್ಲೇ ರೇಷ್ಮಾ ತನ್ನನ್ನು ತಾನು ಸಮರ್ಥಿಸಿಕೊಳ್ಳುತ್ತಿದ್ದಾರೆ. ‘ಭಾರತ ದೇಶದ ಮೇಲೆ ಅಪಾರ ಪ್ರೀತಿ ಇದೆ, ಗೌರವ ನನಗಿದೆ. ದೇಶದಲ್ಲಿರುವ ಪ್ರತಿಯೊಬ್ಬ ಪ್ರಜೆಯು ಸುಖ, ಶಾಂತಿ, ನೆಮ್ಮದಿ, ಸಮೃದ್ಧಿಯಿಂದ ಬದುಕಬೇಕು ಎಂಬುದು ನನ್ನ ಕಾಳಜಿ. ಈ ದೇಶದಲ್ಲಿ ಹುಟ್ಟಿರುವ ಬಗ್ಗೆ ಹೆಮ್ಮೆ ಇದೆ, ಏಕೆಂದರೆ ವೈವಿಧ್ಯತೆಯಲ್ಲಿ ಏಕತೆ ಇರುವ ದೇಶ ಭಾರತ. ಈ ದೇಶದ ಮಣ್ಣಿನ ಮಕ್ಕಳಾದ ನಾವು ದ್ವೇಷದ ಕಾರಣ, ಭಯೋತ್ಪಾದನೆಯ ಕಾರಣಕ್ಕಾಗಿ ಮಣ್ಣಾಗುವುದನ್ನು, ನೋವುಗಳನ್ನು ಅನುಭವಿಸುವುದು ನನಗಿಷ್ಟವಿಲ್ಲ ಎಂದಿದ್ದಾಳೆ.