ಅಪ್ರಾಪ್ತೆಗೆ ಮದುವೆಯಾಗುವಂತೆ ಕಾಟ: ಸವದತ್ತಿಯಲ್ಲಿ ಜೋಡಿ ಕೊಲೆ

0
9
Murder

ಬೆಳಗಾವಿ: ತನ್ನ ಅಪ್ರಾಪ್ತ ವಯಸ್ಸಿನ ಮಗಳನ್ನು ಪ್ರೀತಿಸುವಂತೆ ಕಾಡಿಸುತ್ತಿದ್ದ ಯುವಕ ಹಾಗೂ ಆತನ ಸಹೋದರನನ್ನು ತಂದೆ ಬರ್ಬರವಾಗಿ ಕೊಲೆ ಮಾಡಿರುವ ಘಟನೆಯೊಂದು ಸವದತ್ತಿ ತಾಲೂಕಿನ ಕಾರಿಮನಿ ಗ್ರಾಮದಲ್ಲಿ ನಡೆದಿದೆ.
ಸವದತ್ತಿ ತಾಲ್ಲೂಕಿನ ದುಂಡನಕೊಪ್ಪ ಗ್ರಾಮದ ಫಕೀರಪ್ಪ ಭಾಂವಿಹಾಳ ಎಂಬುವನೇ ಕೊಲೆ ಮಾಡಿದ ವ್ಯಕ್ತಿ ಎಂದು ತಿಳಿದುಬಂದಿದೆ. ತನ್ನ ಅಪ್ರಾಪ್ತ ವಯಸ್ಸಿನ ಮಗಳ ಬೆನ್ನು ಬಿದ್ದಿದ್ದ ಕಾರಿಮನಿ ಗ್ರಾಮದ ಯಲ್ಲಪ್ಪ ಹಳೇಗೋಡಿ(೨೨) ಹಾಗೂ ಆತನ ಸಹೋದರ ಮಾಯಪ್ಪ ಹಳೇಗೋಡಿ ಎಂಬುವರನ್ನು ಕಳೆದ ರಾತ್ರಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಘಟನೆ ಬಳಿಕ ಆರೋಪಿ ಫಕೀರಪ್ಪ ತಲೆಮರೆಸಿಕೊಂಡಿದ್ದು ಆತನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Previous articleಐಐಟಿಯ ನೂತನ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ  ನೇಮಕ
Next articleವೈದ್ಯರ ನಿರ್ಲಕ್ಷಕ್ಕೆ ಬಾಲಕ ಬಲಿ: ಆಸ್ಪತ್ರೆ ಎದುರು ಶವವಿಟ್ಟು ಪ್ರತಿಭಟನೆ