ಬೆಳಗಾವಿ: ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ೬ ಆರೋಪಿಗಳಿಗೆ ಜಿಲ್ಲಾ ಪೋಕ್ಸೋ ನ್ಯಾಯಾಲಯ ೨೦ ವರ್ಷ ಕಠಿಣ ಶಿಕ್ಷೆ ಹಾಗೂ ೧೦ ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ರಾಯಬಾಗ ತಾಲೂಕಿನ ನಸಲಾಪುರ ಗ್ರಾಮದ ಸಚಿನ ಮಾನೆ, ರಾಕೇಶ್ ರಾಯಮಾನೆ, ಚಿಕ್ಕೋಡಿ ತಾಲೂಕಿನ ಗಳತಗಾ ಗ್ರಾಮದ ರೋಹಿಣಿ ದೀಕ್ಷಿತ್, ಮಹಾರಾಷ್ಟ್ರದ ಮೀರಜ್ ತಾಲ್ಲೂಕಿನ ಕುಪ್ಪವಾಡದ ವಿನೋದ್ ರಾಯಮಾನೆ ಹಾಗೂ ವಿಜಯ ಸಾಳುಂಕೆ ಎಂಬುವರಿಗೆ ನ್ಯಾಯಾಲಯ ಶಿಕ್ಷೆ ನೀಡಿದೆ.
ಸಚಿನ ಮಾನೆ ಎಂಬುವರಿಗೆ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿರುವುದಕ್ಕೆ ಶಿಕ್ಷೆಯಾದರೆ ಉಳಿದ ಐವರಿಗೆ ಈ ಕೃತ್ಯಕ್ಕೆ ಪ್ರಚೋದನೆ ನೀಡಿದ ಕಾರಣಕ್ಕೆ ಶಿಕ್ಷೆ ವಿಧಿಸಲಾಗಿದೆ. ಸರ್ಕಾರದ ಪರವಾಗಿ ವಿಶೇಷವಾಗಿ ಅಭಿಯೋಜಕ ಎಲ್.ವಿ. ಪಾಟೀಲ್ ವಾದ ಮಂಡಿಸಿದರು.