ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಗೆ ಶಿಕ್ಷೆ

ಗೋಕಾಕ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಕಾಮುಕನಿಗೆ ೨೦ ವರ್ಷ ಜೈಲು ೧೦ ಸಾವಿರ ದಂಡ ವಿಧಿಸಿ ಜಿಲ್ಲಾ ಹೆಚ್ಚುವರಿ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಕಾಮುಕ ಕೆಂಪಣ್ಣ ರಾಮಪ್ಪ ಹರಿಜನ(೨೯) ಶಿಕ್ಷೆಗೊಳಗಾದ ವ್ಯಕ್ತಿ. ಗೋಕಾಕ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ೨೦೧೮ರಲ್ಲಿ ಈ ಘಟನೆ ನಡೆದಿತ್ತು.