Home Advertisement
Home ತಾಜಾ ಸುದ್ದಿ ಅಬಕಾರಿ ಇಲಾಖೆಯಲ್ಲಿ ₹500 ಕೋಟಿ ಲೂಟಿ!

ಅಬಕಾರಿ ಇಲಾಖೆಯಲ್ಲಿ ₹500 ಕೋಟಿ ಲೂಟಿ!

0
111

ಬೆಂಗಳೂರು: ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರನ್ನು ಈ ಕೂಡಲೇ ಸಚಿವ ಸ್ಥಾನದಿಂದ ವಜಾ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಕಾಂಗ್ರೆಸ್ ಸರ್ಕಾರದ ಲಂಚಾವತಾರದ ಮತ್ತೂಂದು ಕರಾಳ ಅಧ್ಯಾಯ ಬಹಿರಂಗಗೊಂಡಿದ್ದು, ರಾಜ್ಯ ಮದ್ಯ ಮಾರಾಟಗಾರರ ಸಂಘ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ರಾಜ್ಯಪಾಲರಿಗೆ ಬರೆದಿರುವ ಪತ್ರದಲ್ಲಿ ಅಬಕಾರಿ ಸಚಿವರು ‘ಮಂಥ್ಲಿ ಮನಿ’ ಹೆಸರಿನಲ್ಲಿ ಮದ್ಯದ ಅಂಗಡಿಗಳಿಂದ ಪ್ರತಿ ತಿಂಗಳಿಗೆ ₹15 ಕೋಟಿ ರೂಪಾಯಿಯಂತೆ ವರ್ಷಕ್ಕೆ ₹180 ಕೋಟಿ ಲಂಚ ಪಡೆಯುತ್ತಿದ್ದಾರೆ ಎಂದು ಆರೋಪಿಸಿ ಅಬಕಾರಿ ಸಚಿವರನ್ನು ಬದಲಾಯಿಸಲು ಕೋರಿದ್ದಾರೆ.

ವರ್ಗಾವಣೆ ದಂಧೆ, ಲೈಸೆನ್ಸ್ ಮಂಜೂರಾತಿ, ಮದ್ಯದ ಅಂಗಡಿಗಳಿಂದ ‘ಮಂಥ್ಲಿ ಮನಿ’ ಸೇರಿದಂತೆ ಅಬಕಾರಿ ಸಚಿವರು ವರ್ಷಕ್ಕೆ ಸುಮಾರು 500 ಕೋಟಿ ರೂಪಾಯಿ ಭ್ರಷ್ಟಾಚಾರ ಎಸಗುತ್ತಿದ್ದಾರೆ ಎಂದು ರಾಜ್ಯ ಮದ್ಯ ಮಾರಾಟಗಾರರ ಸಂಘ ಮಾಡಿರುವ ಆರೋಪ ಅತ್ಯಂತ ಗಂಭೀರವಾಗಿದ್ದು, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರನ್ನು ಈ ಕೂಡಲೇ ಸಚಿವ ಸ್ಥಾನದಿಂದ ವಜಾ ಮಾಡಿ ಲೋಕಾಯುಕ್ತ ತನಿಖೆಗೆ ವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಅಗ್ರಹಿಸುತ್ತೇನೆ ಎಂದಿದ್ದಾರೆ.

Previous articleರಾಜಕೀಯ ಬಿಡುವ ಅವಶ್ಯಕತೆಯಿಲ್ಲ, ಸದ್ಯಕ್ಕೆ ಮೊದಲು ಮಂತ್ರಿ ಸ್ಥಾನ ಬಿಡಿ…
Next articleಮಾರಕಾಸ್ತ್ರಗಳಿಂದ ಕೊಚ್ಚಿ ಪೊಲೀಸ್ ಕಾನ್ಸ್‌ಟೇಬಲ್‌ ಹತ್ಯೆ..