ಬೆಂಗಳೂರು: ಆರ್‌ಸಿಬಿ ತಂಡದ ವಿಜಯೋತ್ಸವದ ವೇಳೆ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ ಸಾವಿಗೀಡಾದ 11 ಅಭಿಮಾನಿಗಳ ಕುಟುಂಬಗಳಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಲಾ 10 ಲಕ್ಷ ರೂಪಾಯಿಗಳ ಆರ್ಥಿಕ ನೆರವು ಘೋಷಿಸಿದೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು ಬೆಂಗಳೂರಿನಲ್ಲಿ ನಿನ್ನೆ ನಡೆದ ದುರದೃಷ್ಟಕರ ಘಟನೆಯು ಆರ್‌ಸಿಬಿ ಕುಟುಂಬಕ್ಕೆ ತೀವ್ರ ನೋವುಂಟು ಮಾಡಿದೆ. ಗೌರವ ಮತ್ತು ಒಗ್ಗಟ್ಟಿನ ಸಂಕೇತವಾಗಿ, ಘಟನೆಯಲ್ಲಿ ಮೃತಪಟ್ಟ 11 ಜನರ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿಗಳ ಆರ್ಥಿಕ ಸಹಾಯವನ್ನು ಆರ್‌ಸಿಬಿ ಘೋಷಿಸಿದೆ’ ಎಂದು ತಿಳಿಸಿದೆ.