Home ತಾಜಾ ಸುದ್ದಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ ಸಿಐಡಿ ತನಿಖೆಗೆ

ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ ಸಿಐಡಿ ತನಿಖೆಗೆ

0

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣದಲ್ಲಿ ನನ್ನ ಹೆಸರನ್ನು ಯಾಕೆ ತಳುಕು ಹಾಕಲಾಗಿದೆ ಎಂಬುವುದೇ ನನಗೆ ಗೊತ್ತಿಲ್ಲ ಎಂದು ಪರಿಶಿಷ್ಟ ಪಂಗಡ ಕಲ್ಯಾಣ ಸಚಿವ ಬಿ.ನಾಗೇಂದ್ರ ಹೇಳಿದ್ದಾರೆ. ವಿಧಾನಸೌಧದಲ್ಲಿ ತುರ್ತು ಮಾಧ್ಯಮಗೋಷ್ಟಿಯದ್ದೇಶಿಸಿ ಮಾತನಾಡಿದ ಅವರು, ನಮ್ಮ ಇಲಾಖೆಯ ಅಧಿಕಾರಿಗಳ ಮೇಲೆ ದೂರು ದಾಖಲಾಗಿದೆ. ಇದರ ಬಗ್ಗೆ ಮುಖ್ಯಮಂತ್ರಿ ಸಹ ಮಾಹಿತಿ ಪಡೆದುಕೊಂಡಿದ್ದಾರೆ. ವ್ಯವಸ್ಥಾಪಕ ನಿರ್ದೇಶಕರ (ಎಂಡಿ) ಸಹಿಯನ್ನು ವಿಧಿವಿಜ್ಞಾನ ಪ್ರಾಯೋಗಾಲಯಕ್ಕೆ (ಎಫ್​ಎಸ್​ಎಲ್​) ರವಾನಿಸಲಾಗಿದೆ. ಮತ್ತು ಈ ಪ್ರಕರಣವನ್ನು ಸಿಐಡಿ ತನಿಖೆಗೆ ಆದೇಶಿಸಲಾಗಿದೆ. ತನಿಖಾ ವರದಿ ಪ್ರಕಾರ ಮುಂದಿನ ಕ್ರಮ ಜರುಗಿಸಲಾಗುತ್ತದೆ ಎಂದರು

Exit mobile version