ಅಮಾನತು ಮಾಡಿರುವ ನಿರ್ಧಾರ ಸರಿಯಾಗಿದೆ

0
19

ಹುಬ್ಬಳ್ಳಿ: ಸದನದಲ್ಲಿ ಅಸಭ್ಯವಾಗಿ ವರ್ತಿಸಿದ್ದ ಬಿಜೆಪಿ ಶಾಸಕರನ್ನು ಸ್ಪೀಕರ್ ಅಮಾನತು ಮಾಡಿರುವ ನಿರ್ಧಾರ ಸರಿಯಾಗಿದೆ ಎಂದು ಸಚಿವ ದಿನೇಶ ಗುಂಡೂರಾವ್ ಹೇಳಿದರು.
ರವಿವಾರ ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಉದ್ದೇಶಪೂರ್ವಕವಾಗಿ ಬಿಜೆಪಿ ಶಾಸಕರು ಸದನ ಸದನದಲ್ಲಿ ಗದ್ದಲ ಮಾಡಿದ್ದಾರೆ. ಸ್ಪೀಕರ್‌ ಮೇಲೆ ಹಲ್ಲೆ ನಡೆಸಲು ಮುಂದಾಗಿ, ನಿಯಮ ಉಲ್ಲಂಘಿಸಿ ಸದನಕ್ಕೆ ಅಗೌರವ ತಂದಿದ್ದಾರೆ.
ಮುಖ್ಯಮಂತ್ರಿ ಭಾಷಣ ಮಾಡಬಾರದು, ಬಜೆಟ್ ಮೇಲೆ ಚರ್ಚೆ ನಡೆಸಬಾರದು ಎಂದು ಗದ್ದಲ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹನಿಟ್ರ್ಯಾಪ್ ವಿಷಯ ಗಂಭೀರವಾಗಿದ್ದು, ಸಚಿವ ಕೆ.ಎನ್. ರಾಜಣ್ಣ ಅವರು ಈಗಾಗಲೇ ದೂರು ನೀಡಿದ್ದಾರೆ. ಗೃಹ ಸಚಿವರು ಹಾಗೂ ಮುಖ್ಯಮಂತ್ರಿ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದರು.

Previous articleರಸ್ತೆ ಅಪಘಾತದಲ್ಲಿ ಹಲ್ಲುಗಳನ್ನು ಕಳೆದುಕೊಂಡ ಯುವಕ ನೇಣಿಗೆ ಶರಣು
Next articleವ್ಯಾಟ್ಸಪ್ ನಲ್ಲಿ ಬಂದ ಲಿಂಕ್ ಕ್ಲಿಕ್ ಮಾಡಿ ₹ 10 ಲಕ್ಷ ಕಳೆದುಕೊಂಡ…