ಅಯೋಧ್ಯೆ ರಾಮ ಮಂದಿರದ ಮುಖ್ಯ ಅರ್ಚಕ ಆರೋಗ್ಯ ಸ್ಥಿತಿ ಗಂಭೀರ

ಲಖನೌ: ಅಯೋಧ್ಯೆಯ ರಾಮಜನ್ಮಭೂಮಿ ದೇವಸ್ಥಾನದ ಪ್ರಧಾನ ಅರ್ಚಕ ಬ್ರೆನ್ ಸ್ಟೋಕ್ಕ್‌ಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಂಜಯ್ ಗಾಂಧಿ ವೈದ್ಯಕೀಯ ವಿಜ್ಞಾನ ಸ್ನಾತಕೋತ್ತರ ಸಂಸ್ಥೆಯಲ್ಲಿ (ಎಸ್‌ಜಿಪಿಜಿಐ) ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ. 85 ವರ್ಷದ ಮಹಂತ್ ಸತ್ಯೇಂದ್ರ ದಾಸ್ ಅವರನ್ನು ಪ್ರಾಥಮಿಕ ಭಾನುವಾರ SGPGI ಗೆ ದಾಖಲಿಸಲಾಯಿತು . ಶ್ರೀ ಸತ್ಯೇಂದ್ರ ದಾಸ್ ಜೀ ಅವರು ಪಾರ್ಶ್ವವಾಯುದಿಂದ ಬಳಲುತ್ತಿದ್ದಾರೆ. ಜತೆಗೆ, ಮಧುಮೇಹ ಮತ್ತು ರಕ್ತದೊತ್ತಡ ಹೆಚ್ಚಾಗಿದ್ದು, ನ್ಯೂರಾಲಜಿ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸತ್ಯೇಂದ್ರ ದಾಸ್‌ 1992ರ ಡಿಸೆಂಬ‌ರ್ 6ರಂದು ಬಾಬರಿ ಮಸೀದಿಯನ್ನು ಕೆಡವಿದಾಗ ತಾತ್ಕಾಲಿಕ ರಾಮ ಮಂದಿರದ ಅರ್ಚಕರಾಗಿದ್ದರು.